ಕಲ್ಕತ್ತಾ:ಪಶ್ಚಿಮಬಂಗಾಳದ ಜಾದವ್​ಪುರ ವಿಶ್ವವಿದ್ಯಾಲಯದಲ್ಲಿ ಪದವಿ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಸಾವಿಗೆ ರ್‍ಯಾಗಿಂಗ್​ ಹಾಗೂ ಲೈಂಗಿಕ ದೌರ್ಜನ್ಯ ಪ್ರಮುಖ ಕಾರಣ ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ.
ಆಗಸ್ಟ್​ 9ರಂದು ವಿದ್ಯಾರ್ಥಿ ಹಾಸ್ಟೆಲ್​ನ ಎರಡನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ರಕರಣ ಸಂಬಂಧ ಪೊಲೀಸರು ಈವರೆಗೆ 12 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ಒಂದೇ ಹಾಸ್ಟೆಲ್​ನ 89 ವಿದ್ಯಾರ್ಥಿನಿಯರು ನಾಪತ್ತೆ; ಬೆಳಕಿಗೆ ಬಂದದ್ದು ಹೇಗೆ?
ಈ ಕುರಿತು ಪ್ರತಿಕ್ರಿಯಸಿರುವ ತನಿಖಾ ತಂಡದ ಸದಸ್ಯರೊಬ್ಬರು ಪ್ರಕರಣ ಸಂಬಂಧ ಮೃತ ವಿದ್ಯಾರ್ಥಿಯ ಸಹಪಾಠಿಗಳನ್ನು ವಿಚಾರಣೆಗೆ ಒಳಪಡಿಸಿದಾಗ ಕೆಲವು ಸೀನಿಯರ್​ಗಳು ಆತನನ್ನು ವಿವಸ್ತ್ರಗೊಳಿಸಿ ಹಾಸ್ಟೆಲಿನಲ್ಲಿ ಮೆರವಣಿಗೆ ಮಾಡಿದ್ದರು. ಆತ ತಪ್ಪಿಸಿಕೊಳ್ಳಲು ರೂಮಿನೊಳಗೆ ಓಡಿ ಹೋದರು ಬಿಡದ ಆರೋಪಿಗಳು ಆತನ ಮೇಲೆ ಹಲ್ಲೆ ನಡೆಸಿ ಲೈಂಗಿಕ ದೌರ್ಜನ್ಯ ಎಸಗಿದ್ದರು. ಇದರಿಂದ ತೀವ್ರವಾಗಿ ನೊಂದಿದ್ದ ಸಂತ್ರಸ್ತ ಹಾಸ್ಟೆಲ್​ನ ಎರಡನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ವಿದ್ಯಾರ್ಥಿ ಅಪ್ರಾಪ್ತ ವಯಸ್ಕನಾಗಿರುವ ಕಾರಣ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಘಟನೆ ನಡೆದ ಬಳಿಕ ಹಾಸ್ಟೆಲ್​ನಿಂದ ಸುಮಾರು 13 ವಿದ್ಯಾರ್ಥಿಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು. ಪ್ರಕರಣ ಸಂಬಂಧ 13 ಶಂಕಿತರ ಪೈಕಿ 12 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಆರೋಪಿಗಳು ತಪ್ಪೊಪ್ಪಿಕೊಂಡಿದ್ದರು. ಓರ್ವ ಆರೋಪಿ ತಲೆಮಾರಿಸಿಕೊಂಡಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತನಿಖಾ ತಂಡದ ಸದಸ್ಯರೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − eight =
Remember me
