ನವದೆಹಲಿ:ಈಚೆಗೆ ಮುಕ್ತಾಯಗೊಂಡ ಲೋಕಸಭೆ ಚುನಾವನೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ ಸ್ಪಷ್ಟ ಬಹುಮತ ಸಾಧಿಸಿದ್ದು, ಪ್ರಧಾನಿಯಾಗಿ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. 18ನೇ ಲೋಕಸಭೆಯ ಮೊದಲ ಅಧಿವೇಶನದಲ್ಲಿ ನೂತನನಾಗಿ ಆಯ್ಕೆಯಾಗಿರುವ ಸಂಸದರು ಪ್ರಮಾಣವಚನ ಸ್ವೀಕರಿಸುತ್ತಿದ್ದು, ಈ ವೇಳೆ ಎಐಎಂಎಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ಪ್ಯಾಲೆಸ್ತೀನ್ ಪರ ಘೋಷಣೆ ಕೂಗುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಇದಕ್ಕೆ ಬಿಜೆಪಿ ಸಂಸದರು ಕೌಂಟರ್ ಕೊಟ್ಟಿದ್ದು, ಪರ-ವಿರೋಧದ ಚರ್ಚೆ ನಡೆಯುತ್ತಿದೆ.
ಹೈದರಾಬಾದ್​ ಕ್ಷೇತ್ರದ ಸಂಸದರಾಗಿ ಲೋಕಸಭೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಓವೈಸಿ ಕೊನೆಯಲ್ಲಿ ಜೈ ಪ್ಯಾಲೆಸ್ತೀನ್ ಎಂದು ಘೋಷಣೆ ಕೂಗಿದ್ದಾರೆ. ಕೂಡಲೇ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಸಂಸದರು ಗದ್ದಲವನ್ನು ಎಬ್ಬಿಸಿದರು. ಈ ವೇಳೆ ಹಂಗಾಮಿ ಸ್ಪೀಕರ್​ ರಾಧಾಮೋಹನ್ ಸಿಂಗ್, ಘೋಷಣೆಯನ್ನು ದಾಖಲೆಯಿಂದ ತೆಗೆದುಹಾಕುವಂತೆ ಸೂಚನೆ ನೀಡಿದರು.
ಇದನ್ನೂ ಓದಿ:ಅವರ ಯೋಜನೆಯಂತೆ ನಾವು…; ಟೀಮ್​ ಇಂಡಿಯಾ ಗೆಲುವಿನ ಕಾರಣ ಬಿಚ್ಚಿಟ್ಟ ನಾಯಕ ರೋಹಿತ್​
ಓವೈಸಿ ನಂತರ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಜೆಪಿಯ ಛತ್ರ ಪಾಲ್ ಸಿಂಗ್ ಗಂಗ್ವಾರ್ ಕೊನೆಯಲ್ಲಿ ಜೈ ಹಿಂದೂ ರಾಷ್ಟ್ರ ಎಂದು ಘೋಷಣೆ ಕೂಗಿದರು. ಇದಾದ ಬಳಿಕ ಗಾಜಿಯಾಬಾದ್​ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ಅತುಲ್​ ಗರ್ಗ್​ ತಮ್ಮ ಭಾಷಣದ ಕೊನೆಯಲ್ಲಿ ನರೇಂದ್ರ ಮೋದಿ ಜಿಂದಾಬಾದ್​ ಎಂದು ಘೋಷಣೆ ಕೂಗಿದರು. ಇದಕ್ಕೆ ವಿಪಕ್ಷಗಳ ಸದಸ್ಯರು ಆಕ್ಷೇಪಿಸುತ್ತಿದ್ದಂತೆ ಹೆಡ್ಗೆವಾರ್​ ಜಿಂದಾಬಾದ್​ ಎಂದು ಘೋಷಣೆ ಕೂಗಿದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್​ ಯಾದವ್, ಬಿಜೆಪಿ ಸಂಸದರು ಪ್ರಮಾಣವಚನದ ಬಳಿಕ ಘೋಷಣೆ ಕೂಗಿರುವುದು ಸಂವಿಧಾನದ ಮೌಲ್ಯಕ್ಕೆ ವಿರುದ್ಧವಾಗಿದ್ದು, ಕೂಡಲೇ ಅವರ ವಿರುದ್ಧ ಸಭಾಧ್ಯಕ್ಷರು ಕಠಿಣ ಕ್ರಮ ಜರುಗಿಸಬೇಕೆಂದು ಅಖಿಲೇಶ್​ ಆಗ್ರಹಿಸಿದ್ದಾರೆ. ಸಂಸತ್ತಿನಲ್ಲಿ ಘೋಷಣೆ ಕೂಗಿರುವುದು ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಎನ್​ಡಿಎ-ಇಂಡಿಯಾ ಕೂಟದ ನಾಯಕರ ನಡುವಿನ ಕೆಸರೆರಚಾಟಕ್ಕೆ ಕಾರಣವಾಗಿದೆ.
BJP MP from Ghaziabad, Atul Garg said Narendra Modi Zindabad. Opposition started shouting immediately. So he returned and said Dr. Hedgewar Zindabad !Atul Garg Supremacy 😎🔥pic.twitter.com/ShiL77Y2j2
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 5 =
Remember me
