ಚೆನ್ನೈ:ಸೂಪರ್​ ಸ್ಟಾರ್​ ಸೂರ್ಯ ಅವರ ತಮಿಳು ಚಲನಚಿತ್ರ ‘ಜೈಭೀಮ್​’ ಐಎಂಡಿಬಿ ರಾಂಕಿಂಗ್​ನಲ್ಲಿ ಪ್ರಪಥಮ ಸ್ಥಾನ ಗಳಿಸಿದ ಬೆನ್ನಲ್ಲೇ ತಮಿಳುನಾಡಿನಲ್ಲಿ ವಿವಾದಕ್ಕೆ ಸಿಲುಕಿದೆ. ಚಿತ್ರದ ಕೆಲವು ಅಂಶಗಳು ಸ್ಥಳೀಯ ವನ್ನಿಯಾರ್​​ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿವೆ ಎನ್ನಲಾಗಿದ್ದು, ಕೆಲವು ಸಂಘಟನೆಗಳು ಮತ್ತು ರಾಜಕೀಯ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಿಎಂಕೆಯ ಮಯಿಲಾಡುತುರೈ ಜಿಲ್ಲಾ ಕಾರ್ಯದರ್ಶಿ ಸೀತಾಮಲ್ಲಿ ಪಳನಿಸ್ವಾಮಿ ಅವರು ಸೂರ್ಯ ಅವರ ಮೇಲೆ ಹಲ್ಲೆ ಮಾಡುವವರಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಸೋಮವಾರದಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪಳನಿಸ್ವಾಮಿ ಅವರ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್​ 153ಎ ಅಡಿ ಎಫ್​ಐಆರ್​ ದಾಖಲಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:1947ರಲ್ಲಿ ಯಾವ ಯುದ್ಧ ನಡೆಯಿತು ಹೇಳಿದರೆ, ಪದ್ಮಶ್ರೀ ವಾಪಸ್​ ಕೊಡುವೆ ಎಂದ ಕಂಗನಾ
ಚಿತ್ರದ ನಿರ್ಮಾಪಕರೂ ಆದ ಸೂರ್ಯ, ಶೋಷಿತ ಸಮುದಾಯದ ಪರವಾಗಿ ದನಿಯೆತ್ತುವ ವಕೀಲನ ಪಾತ್ರದಲ್ಲಿ ಅಭಿಮಾನಿಗಳ ಮನಸೂರೆಗೊಂಡಿದ್ದಾರೆ. ಆದರೆ, ಪಳನಿಸ್ವಾಮಿ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಸೂರ್ಯ ಅವರ ಚೆನ್ನೈನ ಟಿ.ನಗರದಲ್ಲಿರುವ ನಿವಾಸಕ್ಕೆ ಸಂಪೂರ್ಣ ಪೊಲೀಸ್​ ಭದ್ರತೆ ಒದಗಿಸಲಾಗಿದೆ ಎಂದು ಎಎನ್​ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.(ಏಜೆನ್ಸೀಸ್)
ಡೆತ್​​ನೋಟ್​ ಬರೆದಿಟ್ಟು ನೇಣಿಗೆ ಶರಣಾದ ಗೃಹಿಣಿ; ತನಿಖೆ ಆರಂಭ

ಐಸಿಸಿ ಪುರುಷರ ಕ್ರಿಕೆಟ್​ ಸಮಿತಿ ಅಧ್ಯಕ್ಷರಾಗಿ ಸೌರವ್​ ಗಂಗೂಲಿ ನೇಮಕ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:10 + 14 =
Remember me
