ಬಲ್ಲಿಯಾ:ಜೈಲು ಸೇರಿರುವ ಬಿಎಸ್​ಪಿ ಶಾಸಕ ಮುಖ್ತರ್​ ಅನ್ಸಾರಿಯ ಪತ್ನಿ ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರಿಗೆ ಪತ್ರ ಬರೆದು, ತಮ್ಮ ಕುಟುಂಬಕ್ಕೆ ರಕ್ಷಣೆ ಒದಗಿಸುವಂತೆ ಮನವಿ ಮಾಡಿದ್ದಾರೆ.
ಈ ಮೊದಲು ಗ್ಯಾಂಗ್​ಸ್ಟರ್​ ಆಗಿದ್ದ ಮುಖ್ತಾರ್ ಅನ್ಸಾರಿ ನಂತರ ರಾಜಕಾರಣ ಪ್ರವೇಶಿಸಿ, ಬಿಎಸ್​ಪಿಯಿಂದ ಸ್ಪರ್ಧಿಸಿ ಗೆದ್ದು ಶಾಸಕರಾಗಿದ್ದರು. ಅದಾದ ಬಳಿಕವೂ ಸುಲಿಗೆ ಪ್ರಕರಣವೊಂದರಲ್ಲಿ ಪಂಜಾಬ್​​ನಲ್ಲಿ ಜೈಲು ಸೇರಿದ್ದಾರೆ. ಇನ್ನೂ ಹಲವು ಪ್ರಕರಣಗಳಲ್ಲಿ ಅನ್ಸಾರಿ ಆರೋಪಿಯಾಗಿದ್ದು, ಅವರನ್ನು ಉತ್ತರ ಪ್ರದೇಶಕ್ಕೆ ಕರೆತರಲು ಇಲ್ಲಿನ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ.
ಇದೀಗ ಅವರ ಪತ್ನಿ ಅಫ್ಶಾನ್​ ಅನ್ಸಾರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್​ಗೆ ಪತ್ರ ಬರೆದಿದ್ದು, ತನ್ನ, ಪತಿ, ಪುತ್ರರ ಸುರಕ್ಷತೆಗೆ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ. ಹಾಗೇ ತನ್ನ ಪತಿಯನ್ನು ವಿಚಾರಣೆಗೆಂದು ಕೋರ್ಟ್​ಗೆ ಕರೆತರಬೇಡಿ. ವಿಡಿಯೋ ಕಾನ್ಫರೆನ್ಸ್​ ಮೂಲಕವೇ ಪ್ರಕ್ರಿಯೆ ನಡೆಸಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ಮುಖ್ತಾರ್ ಅನ್ಸಾರಿ ಸಹೋದರ, ಸಂಸದ ಅಫ್ಜಲ್ ಅನ್ಸಾರಿ ತಿಳಿಸಿದ್ದಾರೆ. (ಏಜೆನ್ಸೀಸ್​)
ದೇವಸ್ಥಾನದೊಳಕ್ಕೆ ಪ್ರವೇಶಿಸಿ ನಮಾಜ್ ಮಾಡಿದ ಇಬ್ಬರ ವಿರುದ್ಧ ಕೇಸ್ ದಾಖಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
