ಪಂಜಾಬ್​:ಲೋಕಸಭಾ ಚುನಾವಣೆಯ ಮತ ಏಣಿಕೆ ಪ್ರಾರಂಭವಾಗಿದೆ. ಇನ್ನೇನು ಕೆಲವು ಕ್ಷಣಗಳಲ್ಲಿ  ಅಭ್ಯರ್ಥಿಗಳ ಫಲಿತಾಂಶ ಹೊರ ಬೀಳಲಿದೆ. ಪಂಜಾಬ್‌ನ ಖದೂರ್ ಸಾಹಿಬ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಅಮೃತ್‌ ಪಾಲ್‌ ಸಿಂಗ್‌ ಆರಂಭಿಕ ಹಂತದಲ್ಲೇ ಮುನ್ನಡೆ ಸಿಕ್ಕಿದೆ.
ಪಂಜಾಬ್‌ನ ಖದೂರ್ ಸಾಹಿಬ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಅಮೃತ್‌ ಪಾಲ್‌ ಸಿಂಗ್‌ ಆರಂಭಿಕ ಹಂತದಲ್ಲೇ ಮುನ್ನಡೆ ಸಿಕ್ಕಿದೆ.ಕಾಂಗ್ರೆಸ್‌ನಿಂದ ಕಣಕ್ಕಿಳಿದಿರುವ ಕುಲ್ಬೀರ್‌ ಸಿಂಗ್‌ ಜೀರಾ 32598 ಮತಗಳನ್ನು ಪಡೆದಿದ್ದಾರೆ.
ಕಾನೂನು ಬಾಹಿರ ಚಟುವಟಿಕೆ ಹಿನ್ನಲೆ, ‘ವಾರಿಸ್ ಪಂಜಾಬ್ ದೇ’ ಸಂಘಟನೆಯ ಮುಖ್ಯಸ್ಥ ಹಾಗೂ ಖಲಿಸ್ತಾನಿ ಬೆಂಬಲಿಗ ಅಮೃತಪಾಲ್ ಸಿಂಗ್.ಆಕ್ರಮಣಕಾರಿ ಭಾಷಣ, ಘರ್ಷಣೆಯಲ್ಲಿ ತೊಡಗಿ ಸಮಾಜದಲ್ಲಿ ಅಶಾಂತಿ ಎಬ್ಬಿಸಿದ್ದ, ಖಲಿಸ್ತಾನಿ ಬೆಂಬಲಿಗ ಅಮೃತಪಾಲ ಸಿಂಗ್, ತಲೆಮರೆಸಿಕೊಂಡಿದ್ದ ಸ್ವಘೋಷಿತ ಮೂಲಭೂತವಾದಿ ಹಾಗೂ ಸಿಖ್ ಬೋಧಕ ಅಮೃತಪಾಲ್ ಸಿಂಗ್ ವಿರುದ್ಧ ಪೊಲೀಸರು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದರು. ಸಮಾಜದಲ್ಲಿ ಅಶಾಂತಿ ಎಬ್ಬಿಸಲು ಪ್ರಯತ್ನಿಸಿದ್ದ ಸಿಂಗ್ ಸಹಚರರನ್ನು ಬಂಧಿಸಿ, ಅಪಾರ ಪ್ರಮಾಣದಲ್ಲಿ ಶಸ್ತಾಸ್ತ್ರಗಳನ್ನು ವಶಪಡಿಕೊಳ್ಳಲಾಗಿತ್ತು.
ಅಮೃತಸರದ ಜಲ್ಲುಪುರ್‌ ಖೇರಾ ಎಂಬ ಗ್ರಾಮದಲ್ಲಿ 1993ರಲ್ಲಿ ಜನಿಸಿದ ಅಮೃತ್‌ಪಾಲ್‌, 12ನೇ ತರಗತಿವರೆಗೆ ಓದಿದ್ದಾನೆ. 2012ರಲ್ಲಿ ಭಾರತ ತೊರೆದು, ದುಬೈಯಲ್ಲಿ ತನ್ನ ಚಿಕ್ಕಪ್ಪನ ಟ್ರಾನ್ಸ್‌ಪೋರ್ಟ್‌ ಕಂಪನಿಯಲ್ಲಿ ದುಡಿದ. ಈತ ಪಂಜಾಬ್‌ನ ಪೊಲೀಸರ ಹಾಗೂ ರಾಜಕಾರಣಿಗಳ ಗಮನಕ್ಕೆ ಬಂದುದೇ ಆರು ತಿಂಗಳ ಹಿಂದೆ- ʼವಾರಿಸ್‌ ಪಂಜಾಬ್‌ ದೇʼ ಸಂಘಟನೆಯ ಮುಖ್ಯಸ್ಥನಾಗಿ ನಿಯುಕ್ತನಾದ.
2022ರ ಸೆಪ್ಟೆಂಬರ್‌ 25ರಂದು ಆನಂದ್‌ಪುರ ಸಾಹಿಬ್‌ನಲ್ಲಿ ನಡೆದ ಸಿಖ್‌ ಧರ್ಮದ ಸಾಂಪ್ರದಾಯಿಕ ಬ್ಯಾಪ್ಟಿಸಂ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅಮೃತ್‌ಪಾಲ್‌, ʼಅಮೃತಧಾರಿ ಸಿಖ್‌ʼ ಎನಿಸಿದ. ಈ ಕಾರ್ಯಕ್ರಮಕ್ಕೆ ಹರಿದುಬಂದ ಜನಸಾಗರ ನೋಡಿ ಪಂಜಾಬ್‌ ಅವಾಕ್ಕಾಯಿತು. ಇದಾದ ನಾಲ್ಕು ದಿನಗಳ ನಂತರ ಸೆ. 29ರಂದು ʼದಸ್ತರ್‌ ಬಂದಿʼ ಕಾರ್ಯಕ್ರಮ ನಡೆಯಿತು. ಇದಕ್ಕೂ ದಾಖಲೆ ಸಂಖ್ಯೆಯ ಅಭಿಮಾನಿಗಳು ನೆರೆದಿದ್ದರು.
ಹಲವು ಸಮಯದಿಂದ ಆತ ಫೇಸ್‌ಬುಕ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಖಲಿಸ್ತಾನ್ ಪರ ಪೋಸ್ಟ್‌ಗಳನ್ನು ಹಾಕುತ್ತಿದ್ದಾನೆ. ಹಿಂದು ರಾಷ್ಟ್ರ ವಾದ ಸರಿ ಎಂದಾದರೆ ಖಲಿಸ್ತಾನ್‌ ಯಾಕೆ ತಪ್ಪು ಎಂದು ಪ್ರಶ್ನಿಸುತ್ತಾನೆ. ಇವನು ಪಾರಂಪರಿಕ ಧಾರ್ಮಿಕ ತರಬೇತಿ ಪಡೆದು ಮುಖ್ಯಸ್ಥನಾಗಿಲ್ಲ. ರಾಜಕೀಯ ವಿಚಾರದಿಂದ ಆರಂಭಿಸಿ ಮತೀಯ ಗುರು ಎನಿಸಿಕೊಂಡವನು. ಧಾರ್ಮಿಕ ವಿಷಯಗಳನ್ನು ಉಲ್ಲೇಖಿಸುವಾಗ ಈತನ ತಿಳಿವಳಿಕೆಯ ಪೊಳ್ಳುತನ ಎದ್ದು ಕಾಣಿಸುತ್ತದೆ. ಆದರೂ ಈತನ ಕಠೋರ ರಾಜಕೀಯ ನಿಲುವುಗಳಿಂದಾಗಿ ಅಭಿಮಾನಿಗಳು ಈತನನ್ನು ಸುತ್ತುವರಿಯುತ್ತಾರೆ. 2021ರಲ್ಲಿ ಕೆಂಪು ಕೋಟೆಯ ಮೇಲೆ ನಡೆದ ಗುಂಪು ದಾಳಿಯ ವೇಳೆ ಅದರ ನೇತೃತ್ವ ವಹಿಸಿದ್ದ ದೀಪ್‌ ಸಿಧುವಿನ ಕೃತ್ಯವನ್ನು ಈತ ಸಮರ್ಥಿಸಿಕೊಂಡಿದ್ದ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 1 =
Remember me
