ನವದೆಹಲಿ:ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮಸೂದ್ ಅಜರ್ (55) ಸಾವನ್ನಪ್ಪಿದ್ದಾನೆ. ಇಂದು ಬೆಳಗ್ಗೆ ಅಪರಿಚಿತ ದುಷ್ಕರ್ಮಿಗಳು ನಡೆಸಿದ ಬಾಂಬ್ ದಾಳಿಯಲ್ಲಿ ಮಸೂದ್ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಆದರೆ ಈ ಕುರಿತಾಗಿ ಯಾವುದೇ ಅಧಿಕೃತವಾದ ಮಾಹಿತಿ ಕೂಡಾ ಲಭ್ಯವಾಗಿಲ್ಲ.
ಮೊಹಮ್ಮದ್ ಮಸೂದ್ ಅಜರ್ ಅಲ್ವಿ, ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಸ್ಥಾಪಕ. ಸೋಮವಾರ ಬೆಳಗ್ಗೆ ಭಾವಲ್‌ಪುರ ಮಸೀದಿಯಿಂದ ವಾಪಸಾಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಗಳು ಅವರ ಮೇಲೆ ಬಾಂಬ್ ಎಸೆದಿದ್ದಾರೆ ಎಂದು ವರದಿಯಾಗಿದೆ. ಮಸೂದ್ ಅಜರ್ ಸಾವಿನ ಕುರಿತು ಅಧಿಕೃತ ಘೋಷಣೆ ಇನ್ನಷ್ಟೇ ಹೊರಬೀಳಬೇಕಿದೆ. ಆದರೆ ಖಾಸಗಿ ವಾಹಿನಿ ಈ ಕುರಿತಾಗಿ ಕೆಲವು ಫೋಟೋಗಳನ್ನು ಶೇರ್​ ಮಾಡಿ ಮಸೂದ್ ಅಜರ್ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದೆ. ಆದರೆ ಈ ಕುರಿತಾಗಿ ಅಧಿಕೃತ ಮಾಹಿತಿ ಹೊರ ಬರಬೇಕಿದೆ.
https://twitter.com/TimesAlgebraIND/status/1741734792885084525
ಪಾಕಿಸ್ತಾನದಲ್ಲಿ ಕೆಲವು ದಿನಗಳಿಂದ ಭಯೋತ್ಪಾದಕರು ಮತ್ತು ಭಯೋತ್ಪಾದಕ ಸಂಘಟನೆಗಳ ಮುಖಂಡರು ನಿಗೂಢ ಸಂದರ್ಭಗಳಲ್ಲಿ ಸಾಯುತ್ತಿದ್ದಾರೆ ಎಂದು ತಿಳಿದುಬಂದಿದೆ.
2001 ರ ಭಾರತೀಯ ಸಂಸತ್ತಿನ ಮೇಲಿನ ದಾಳಿ, 2008 ರ ಮುಂಬೈ ದಾಳಿ, 2016 ರ ಪಠಾಣ್‌ ಕೋಟ್ ದಾಳಿ ಮತ್ತು 2019 ರ ಪುಲ್ವಾಮಾ ದಾಳಿಗಳಿಗೆ ಕಾರಣವಾದ ಜೈಶ್-ಎ-ಮೊಹಮ್ಮದ್ ಅನ್ನು ಅಜಹರ ಸ್ಥಾಪಿಸಿದ್ದನು.
ಪಾಕಿಸ್ತಾನದ ಪಂಜಾಬ್ ರಾಜ್ಯದಲ್ಲಿ ವಿದ್ಯಾವಂತ ಕುಟುಂಬದಲ್ಲಿ ಜನಿಸಿದ ಅಜರ್ ಕಾಶ್ಮೀರದ ಸ್ವಾತಂತ್ರ್ಯದ ಹೆಸರಿನಲ್ಲಿ ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗಿದ್ದನು. ಜಿಹಾದಿಯನ್ನು ಬ್ರಿಟನ್‌ಗೆ ಪರಿಚಯಿಸಿದವನು ಈತ. ಭಾರತವು ಅವನನ್ನು ಬಂಧಿಸಿದರೆ, ಬಿಡುಗಡೆಯ ಬೇಡಿಕೆಯೊಂದಿಗೆ ವಿಮಾನವನ್ನು ಹೈಜಾಕ್ ಮಾಡುತ್ತಾನೆ.  ಜೈಲಿನಲ್ಲಿದ್ದಾಗ ಅಮೆರಿಕದ ತನಿಖಾ ಸಂಸ್ಥೆಗಳು, ಇಂಟರ್‌ಪೋಲ್ ಕೂಡ ಈ ಹಿಂದೆ ಅವರನ್ನು ವಿಚಾರಣೆ ನಡೆಸಿದ್ದವು. ಮೇ 1, 2019 ರಂದು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಅವನನ್ನು ಅಂತರರಾಷ್ಟ್ರೀಯ ಭಯೋತ್ಪಾದಕ ಎಂದು ಘೋಷಿಸಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
