ನವದೆಹಲಿ:ಜಾಮಿಯಾ ನಗರದಲ್ಲಿ ಗುರುವಾರ ಗುಂಡು ಹಾರಿಸಿದ ಶೂಟರ್‌ನನ್ನು 14 ದಿನಗಳವರೆಗೆ ಬಾಲಮಂದಿರ ವಶಕ್ಕೆ ಒಪ್ಪಿಸಲಾಗಿದೆ.
ಶೂಟರ್‌ನ 10 ನೇ ತರಗತಿಯ ಮಾರ್ಕ್‌ಕಾರ್ಡ್​ ಮತ್ತು ಆಧಾರ್ ಕಾರ್ಡ್ ಆಧಾರದ ಮೇಲೆ ಬಾಲಾಪರಾಧಿಯಾಗಿ ಎಂದು ಪರಿಗಣಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯ ಮೂಳೆ ಪರೀಕ್ಷೆಗೆ ಪೊಲೀಸರು ಮುಂದಾಗಿದ್ದು, ಅದಕ್ಕಾಗಿ ಬಾಲಾಪರಾಧಿ ನ್ಯಾಯ ಮಂಡಳಿಯ ಮೊರೆ ಹೋಗಿದ್ದಾರೆ. ಅಲ್ಲಿ ಅನುಮತಿ ದೊರೆತ ಬಳಿಕ ದೆಹಲಿಯ ಆರ್​ಎಂಎಲ್​ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಯಲಿದೆ.
ಗುರುವಾಗ ಜಾಮಿಯಾ ನಗರದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಆರೋಪಿ ಗುಂಡಿನ ದಾಳಿ ನಡೆಸಿದ್ದ. ಅಲ್ಲದೆ ಯಾರಿಗೆ ಬೇಕು ಸ್ವಾತಂತ್ರ್ಯ.. ಇಲ್ಲಿದೆ… ಎಂದು ಕೂಗಿದ್ದ. ಇವನನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಇದನ್ನೂ ಓದಿ:VIDEO|ಯಾರಿಗೆ ಬೇಕು ಸ್ವಾತಂತ್ರ್ಯ? ನಾನು ನೀಡುತ್ತೇನೆಂದು ಕೂಗಿ ಸಿಎಎ ವಿರೋಧಿ ಪ್ರತಿಭಟನಾಕಾರರ ಮೇಲೆ ಫೈರಿಂಗ್​
ಆರೋಪಿಗೆ ಪಿಸ್ತೂಲ್​ ದೊರೆತದ್ದು ಎಲ್ಲಿಂದ ಎನ್ನುವ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತನ್ನ ಹಳ್ಳಿಯಲ್ಲಿ ಸ್ಥಳೀಯವಾಗಿ ತಯಾರಿಸಿದ್ದ ಪಿಸ್ತೂಲನ್ನು 10 ಸಾವಿರ ರೂಪಾಯಿ ಕೊಟ್ಟು ಖರೀದಿಸಿದ್ದೆ ಎಂದು ಪೊಲೀಸರಿಗೆ ಆರೋಪಿ ತಿಳಿಸಿದ್ದಾನೆ.
ಪ್ರಕರಣವನ್ನು ಕ್ರೈಂ ಬ್ರಾಂಚ್​ಗೆ ವರ್ಗಾಯಿಸಲಾಗಿದೆ. ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಗುಂಡಿನ ದಾಳಿ ನಡೆಸಿದವನ ವಿರುದ್ಧ ಎಫ್​ಐಆರ್​ ಸಿದ್ಧಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 17 =
Remember me
