ಶ್ರೀನಗರ:ಜಮ್ಮು -ಕಾಶ್ಮೀರದ ಕುಪ್ವಾರ ಮತ್ತು ಪುಲ್ವಾಮದಲ್ಲಿ ಮಧ್ಯರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 7 ಉಗ್ರರನ್ನು ಸದೆಬಡಿದಿದ್ದಾರೆ.
ಉಗ್ರರು ಇರುವ ಖಚಿತ ಮಾಹಿತಿ ಆಧರಿಸಿ ಶೋಧ ಕಾರ್ಯಗೊಂಡ ವೇಳೆ ಸೇನೆಯ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಸೇನೆಯ ಪ್ರತಿ ದಾಳಿಗೆ ಮೂವರು ಉಗ್ರರು ಹತರಾಗಿದ್ದಾರೆ.
ಕಳೆದ 20 ದಿನಗಳಲ್ಲಿ 24 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಭದ್ರತಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ನಡುವೆ ಇನ್ನೂ ಅಡಗಿರುವ ಉಗ್ರರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.ಈ ವರ್ಷದಲ್ಲಿ ಕಾಶ್ಮೀರ ಕಣಿವೆಯಲ್ಲಿ ಹತ್ಯೆಯಾಗಿರುವ 114 ಉಗ್ರರ ಪೈಕಿ 32ಮಂದಿ ಪಾಕ್​ ಮೂಲದವರಾಗಿದ್ದಾರೆ ಎಂದು ಐಜಿಪಿ ಕಶ್ಮಿರ್​ ವಿಜಯ್​ ಕುಮಾರ್​ ತಿಳಿಸಿದ್ದಾರೆ.
ಸದ್ಯ ನಿನ್ನೆ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟ ಉಗ್ರರು ಲಷ್ಕರ್​​ ಉಗ್ರ ಸಂಘಟನೆಯವರೆಂದು ಗುರುತಿಸಲಾಗಿದೆ. ಭಾರತೀಯ ಸೇನೆ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ ಎಂದು ತಿಳಿಸಿದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 7 =
Remember me
