ನವದೆಹಲಿ:ಉ್ರಗರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಉಪ ಪೊಲೀಸ್​ ಆಯುಕ್ತರೊಬ್ಬರನ್ನು ಬಂಧಿಸಲಾಗಿದೆ. ಬಂಧಿತ ಅಧಿಕಾರಿಯನ್ನು ಶೇಖ್​ ಆದಿಲ್​ ಮುಸ್ತಾಕ್​ ಎಂದು ಗುರುತಿಸಲಾಗಿದೆ.
ಬಂಧನದಿಂದ ತಪ್ಪಿಸಿಕೊಳ್ಳಲು ಉಗ್ರನಿಗೆ ಸಹಾಯ ಮಾಡಿದ ಮತ್ತು ಉಗ್ರನ ವಿರುದ್ಧ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯನ್ನೇ ಪ್ರಕರಣದಲ್ಲಿ ಸಿಲುಕಿಸಲು ಯತ್ನಿಸಿದ ಆರೋಪ ಶೇಖ್​ ಆದಿಲ್​ ಮುಸ್ತಾಕ್​ ವಿರುದ್ಧ ಕೇಳಿಬಂದಿದೆ. ಇದಿಷ್ಟೇ ಅಲ್ಲದೆ, ಭ್ರಷ್ಟಾಚಾರ ಸೇರಿದಂತೆ ಹಲವು ಪ್ರಕರಣಗಳಲ್ಲಿ ಈ ಅಧಿಕಾರಿ ಭಾಗಿಯಾಗಿದ್ದಾರೆ. ಅಧಿಕಾರಿಯನ್ನು ಶ್ರೀನಗರದ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.
ಇದನ್ನೂ ಓದಿ:ತವರಿನ ವಿಶ್ವಕಪ್​ಗೆ ಮುನ್ನ ಭಾರತಕ್ಕೆಆಸೀಸ್​ ಸತ್ವಪರೀಕ್ಷೆ; ಮೊಹಾಲಿಯಲ್ಲಿ ಇಂದು ಮೊದಲ ಏಕದಿನ
ಜುಲೈನಲ್ಲಿ ಬಂಧನಕ್ಕೆ ಒಳಗಾದ ಉಗ್ರನ ಮೊಬೈಲ್​ ಫೋನ್ ಅನ್ನು ವಿಶ್ಲೇಷಿಸಿದಾಗ ಆತ ಆದಿಲ್ ಮುಷ್ತಾಕ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎಂಬುದು ತಿಳಿದುಬಂದಿದೆ. ಈ ಅಧಿಕಾರಿ, ಕಾನೂನಿನ ಕಣ್ಣು ತಪ್ಪಿಸುವುದು ಹೇಗೆ ಎಂದು ಉಗ್ರನಿಗೆ ಮಾರ್ಗದರ್ಶನ ನೀಡುತ್ತಿದ್ದರು. ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಆದಿಲ್ ಮುಷ್ತಾಕ್ ಟೆಲಿಗ್ರಾಂ ಆ್ಯಪ್‌ನಲ್ಲಿ ಆರೋಪಿಯೊಂದಿಗೆ ಮಾತನಾಡುತ್ತಿದ್ದರು.
ಉಗ್ರ ಮತ್ತು ಉಪ ಅಧೀಕ್ಷಕರ ನಡುವೆ ಕನಿಷ್ಠ 40 ಕರೆಗಳಿವೆ. ಬಂಧನದಿಂದ ತಪ್ಪಿಸಿಕೊಳ್ಳುವುದು ಮತ್ತು ಕಾನೂನು ನೆರವು ಪಡೆಯುವುದು ಹೇಗೆ ಎಂದು ಮಾರ್ಗದರ್ಶನ ನೀಡುತ್ತಿದ್ದರು ಎಂದು ತನಿಖೆಯ ಮೇಲ್ವಿಚಾರಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭಯೋತ್ಪಾದಕ ನಿಧಿ ಪ್ರಕರಣದಲ್ಲಿ ತನಿಖಾ ಅಧಿಕಾರಿಯನ್ನು ಸಿಲುಕಿಸಲು ಉಗ್ರನ ಪರವಾಗಿ ಬಂಧಿತ ಅಧಿಕಾರಿ ಸುಳ್ಳು ದೂರನ್ನು ರಚಿಸಿದ್ದರು. ಉಗ್ರನಿಂದ ಆದಿಲ್ ಮುಷ್ತಾಕ್ 5 ಲಕ್ಷ ರೂ. ಪಡೆದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಲಷ್ಕರ್ ಹಣಕಾಸು ನಿರ್ವಹಣೆಗಾಗಿ ಸೋಪೋರ್‌ನಲ್ಲಿ ನಕಲಿ ದಾಖಲೆಗಳ ಮೇಲೆ ಬ್ಯಾಂಕ್ ಖಾತೆ ತೆರೆದಿದ್ದ ಮುಝಾಮಿಲ್ ಜಹೂರ್‌ನೊಂದಿಗೆ ಅಧಿಕಾರಿ ನಿಕಟ ಸಂಪರ್ಕದಲ್ಲಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.(ಏಜೆನ್ಸೀಸ್​)
ಸೆ.29ಕ್ಕೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ: ಹೋಟೆಲ್​​​ಗಳಲ್ಲಿ ಸ್ವಚ್ಚತೆಗೆ ಇಲಾಖೆ ಸೂಚನೆ

ಸೆ.26ಕ್ಕೆ ಅಂಗವಿಕಲರಿಗೆ ಉದ್ಯೋಗ ಮೇಳ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 6 =
Remember me
