ಶ್ರೀನಗರ :ಕರೊನಾ ಹಿನ್ನೆಲೆಯಲ್ಲಿ ಲಾಕ್​ಡೌನ್​ ಜಾರಿಯಿಂದಾಗಿ ಮನೆಯಲ್ಲಿ ಮಹಿಳೆಯರ ಮೇಲೆ ನಡೆಯುವ ಕಿರುಕುಳ ಪ್ರಕರಣಗಳನ್ನು ಶೀಘ್ರವೇ ವಿಚಾರಣೆ ನಡೆಸಬೇಕು ಎಂದು ಇತರ ನ್ಯಾಯಾಲಯಗಳಿಗೆ ಜಮ್ಮು ಮತ್ತು ಕಾಶ್ಮೀರ ಉಚ್ಛ ನ್ಯಾಯಾಲಯ ಆದೇಶಿಸಿದೆ.
ಲಾಕ್​ಡೌನ್​ ಜಾರಿಯಿಂದಾಗಿ ಮಹಿಳೆಯರ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಉಚ್ಛ ನ್ಯಾಯಾಲಯ ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಂಡಿದ್ದು, ಶನಿವಾರ ಮುಖ್ಯ ನ್ಯಾಯಮೂರ್ತಿ, ಜಸ್ಟೀಸ್​ ಗೀತಾ ಮಿತ್ತಲ್​ ಹಾಗೂ ಜಸ್ಟೀಸ್​ ರಜನೀಶ್​ ಓಸ್ವಾಲ್​ ವಿಡಿಯೋ ಕಾನ್ಫರೆನ್ಸ್​ ಮೂಲಕ ಪ್ರಕರಣಗಳನ್ನು ಆಲಿಸಿದರು.
ಲಾಕ್​ಡೌನ್​ ಸಂದರ್ಭದಲ್ಲಿ ಮನೆಯಲ್ಲಿ ಮಹಿಳೆಯರ ಮೇಲೆ ನಡೆಯುವ ಕಿರುಕುಳ ಹಾಗೂ ಇತರ ಕಿರುಕಳದ ವಿರುದ್ಧ ಕ್ರಮ ಕೈಗೊಂಡ ಬಗ್ಗೆ ಉಚ್ಛ ನ್ಯಾಯಾಲಯ ಸರ್ಕಾರವನ್ನು ಪ್ರಶ್ನಿಸಿದೆ ಅಷ್ಟೇ ಅಲ್ಲದೆ ಸಂಬಂಧಪಟ್ಟ ಅಧಿಕಾರಿಗಳಿಗೆ ಇತರ ದೇಶಗಳು ಹೇಗೆ ಪರಿಹಾರ ಕ್ರಮ ಕೈಗೊಂಡಿವೆ ಎಂಬುದರ ಬಗ್ಗೆಯೂ ತಿಳಿದುಕೊಳ್ಳಬೇಕೆಂದು ಸೂಚಿಸಿದೆ. ಕೈಗೊಂಡ ಪರಿಹಾರ ಮಾರ್ಗ ಮತ್ತು ಕ್ರಮಗಳ ಕುರಿತು ಮುಂದಿನ ಕೋರ್ಟ್​ ಸೆಷನ್​ ಸಂದರ್ಭದಲ್ಲಿ ಮಾಹಿತಿ ನೀಡಲು ಹೈಕೋರ್ಟ್​ ಸೂಚಿಸಿದೆ.
ಮಹಿಳಾ ದೌರ್ಜನ್ಯದ ಬಗ್ಗೆ ಪೊಲೀಸ್​ ಠಾಣೆಯಲ್ಲಿ, ನ್ಯಾಯಾಲಯಗಳಲ್ಲಿ ಇತ್ಯರ್ಥವಾಗದೇ ಇರುವ ದೂರುಗಳ ಬಗ್ಗೆ ಮಾಹಿತಿ ನೀಡಬೇಕೆಂದು ಉಚ್ಛ ನ್ಯಾಯಾಲಯ ಜಮ್ಮು ಮತ್ತು ಕಾಶ್ಮೀರ ಲೀಗಲ್​ ಸರ್ವೀಸ್​ ಅಥಾರಿಟಿಯ ಕಾರ್ಯದರ್ಶಿಗೆ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − three =
Remember me
