ಶ್ರೀನಗರ:ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಭದ್ರತಾ ಪಡೆ ಕಾರ್ಯಾಚರಣೆ ನಡೆಸುತ್ತಿದೆ. ರಿಯಾಸಿಯಲ್ಲಿ ನಡೆದ ಉಗ್ರರ ದಾಳಿಯ ನಂತರ ಜಮ್ಮು ವಿಭಾಗದಲ್ಲಿ ಉಗ್ರರ ದಾಳಿ ಹೆಚ್ಚಾಗಿದೆ. ಈ ಅನುಕ್ರಮದಲ್ಲಿ ಭದ್ರತಾ ಸಿಬ್ಬಂದಿ ಮತ್ತು ಭಯೋತ್ಪಾದಕರ ನಡುವೆ ಹಲವಾರು ಎನ್‌ಕೌಂಟರ್‌ಗಳು ನಡೆದಿವೆ. ಈ ಮಧ್ಯೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಪೊಲೀಸರು ಶನಿವಾರ(ಆಗಸ್ಟ್​​ 10) ನಾಲ್ವರು ಭಯೋತ್ಪಾದಕರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ.
ಇದನ್ನು ಓದಿ:ದೆಹಲಿ ಸಿಎಂ​ ಬಿಡುಗಡೆ ಆಗಬೇಕೆ.. ಹೀಗೆ ಮಾಡುವುದು ಸೂಕ್ತ: ಮನೀಶ್​ ಸಿಸೋಡಿಯಾ
ಸಿಕ್ಕಿರುವ ಮಾಹಿತಿಯ ಪ್ರಕಾರ, ಕಥುವಾ ಪೊಲೀಸರು ಬಿಡುಗಡೆ ಮಾಡಿರುವ ಈ ಸ್ಕೆಚ್​​ನಲ್ಲಿ ಕಂಡುಬರುವ ಭಯೋತ್ಪಾದಕರು ಕೊನೆಯದಾಗಿ ಮಲ್ಹಾರ್, ಬಾನಿ ಮತ್ತು ಸಿಯೋಜ್‌ಧಾರ್‌ನ ಧೋಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಈ ಭಯೋತ್ಪಾದಕರ ಬಗ್ಗೆ ಮಾಹಿತಿ ನೀಡಿದವರಿಗೆ 20 ಲಕ್ಷ ರೂಪಾಯಿ ನಗದು ಬಹುಮಾನವನ್ನೂ ನೀಡಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಭಯೋತ್ಪಾದಕರ ಬಗ್ಗೆ ವಿಶ್ವಾಸಾರ್ಹ ಮಾಹಿತಿ ನೀಡುವ ಯಾರಿಗಾದರೂ ಸೂಕ್ತ ಬಹುಮಾನ ನೀಡಲಾಗುವುದು. ಪ್ರತಿ ಭಯೋತ್ಪಾದಕನ ಸುಳಿವಿಗೆ 5 ಲಕ್ಷಗಳ ಬಹುಮಾನ ನೀಡಲಾಗುವುದು ಎಂದು ರೇಖಾಚಿತ್ರ ಬಿಡುಗಡೆ ಮಾಡಿರುವ ಕಥುವಾ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
Kathua Police releases sketches of 04 terrorists who were last seen in dhoks of Malhar , Bani & Seojdhar. A reward of 05lakhs on each terrorist for an actionable information. Anyone with credible information of terrorists will also be suitably rewarded.@JmuKmrPolice@ZPHQJammupic.twitter.com/FsBG1qdZdt
ಜಮ್ಮು ವಿಭಾಗದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಭಯೋತ್ಪಾದಕ ದಾಳಿಯಿಂದಾಗಿ ಭದ್ರತಾ ಪಡೆಗಳು ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ಈ ಯೋಜನೆಯನ್ನು ರೂಪಿಸಿದೆ. ವಿಭಾಗದಲ್ಲಿ 48 ಸ್ಥಳಗಳನ್ನು ಗುರುತಿಸಲಾಗಿದ್ದು ಅಲ್ಲಿ ಸೇನೆ, ಅರೆಸೇನಾ ಪಡೆ ಮತ್ತು ಪೊಲೀಸರನ್ನು ನಿಯೋಜಿಸಲಾಗಿದೆ. (ಏಜೆನ್ಸೀಸ್​​)
ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ರಾಜೀನಾಮೆಗೆ ಪಟ್ಟು; ಬಾಂಗ್ಲಾದಲ್ಲಿ ಮತ್ತಷ್ಟು ಭುಗಿಲೆದ್ದ ಹಿಂಸಾಚಾರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − four =
Remember me
