ಜಮ್ಮು ಕಾಶ್ಮೀರ:ಭದ್ರತಾ ಪಡೆಗಳು ಕಾಶ್ಮೀರದ ಅವಂತಿಪುರ(ಅವಂತಿಪೋರಾ) ಎಂಬಲ್ಲಿ ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆದಿದೆ.
ಸೇನೆಯ ರಾಷ್ಟ್ರೀಯ ರೈಫಲ್ಸ್​, ಸಿಆರ್​ಪಿಎಫ್​ ಮತ್ತು ಸ್ಥಳಿಯ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಅವಂತಿಪುರ ಬಳಿಯ ಸತ್​ ಪೋಕ್ರಾನ್​ ಎಂಬಲ್ಲಿ ಗುಂಡಿನ ಚಕಮಕಿ ನಡೆದಿದೆ.
ಸತ್​ಪೋಕ್ರಾನ್​ ಪ್ರದೇಶದಲ್ಲಿ ಕೆಲವು ಉಗ್ರರ ಇದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರಿದವು. ಆಗ ಗುಂಡಿನ ದಾಳಿ ನಡೆಸಲಾಯಿತು. ನಂತರ ಹೆಚ್ಚುವರಿ ಪಡೆಗಳು ಆಗಮಿಸಿವೆ.
ಜಮ್ಮು ಕಾಶ್ಮೀರ ಪೊಲೀಸರು ಈ ಬಗ್ಗೆ ಟ್ವೀಟ್​ ಮಾಡಿದ್ದಾರೆ. ಅವಂತಿಪುರ ಬಳಿಯಲ್ಲಿ ಗುಂಡಿನ ದಾಳಿ ನಡೆಯುತ್ತಿದೆ. ಪೊಲೀಸ್​ ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ನಿರತವಾಗಿವೆ ಎಂದು ತಿಳಿಸಿದೆ.
ಪುಲ್ವಾಮಾದಲ್ಲಿ ಪೆಟ್ರೋಲ್​ ಬಾಂಬ್​ ದಾಳಿ ನಡೆದ ಒಂದು ದಿನದ ಬಳಿಕ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ. ದಾಳಿಯಲ್ಲಿ ಯಾವ ಹಾನಿಯಾದ ಬಗ್ಗೆ ಈವರೆಗೆ ವರದಿಯಾಗಿಲ್ಲ.
ಪುಲ್ವಾಮಾ ಬಳಿಯ ನೇವಾ ಎಂಬಲ್ಲಿ ಸೋಮವಾರ ಸಂಜೆ ಸಿಆರ್​ಪಿಎಫ್​ ಮೇಲೆ ಪೆಟ್ರೋಲ್​ ಬಾಂಬ್​ ದಾಳಿ ನಡೆದಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಾಂಬ್​ ದಾಳಿಯಿಂದ ಯಾವ ನಷ್ಟವೂ ಆಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಮೊನ್ನೆಯಷ್ಟೇ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಭದ್ರತಾ ಪಡೆಗಳ ಮುಖಾಮುಖಿಯಲ್ಲಿ ಪೊಲೀಸ್ ಕೆಲಸ ಬಿಟ್ಟು ಹೋಗಿದ್ದವರು ಸೇರಿ ಮೂವರು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕರು ಸಾವನ್ನಪ್ಪಿದ್ದರು.(ಏಜೆನ್ಸೀಸ್​)
#Encounterhas started at#Awantipora.#Police& security forces are on the job. Further details shall follow.@JmuKmrPolice
— Kashmir Zone Police (@KashmirPolice)January 21, 2020

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:13 − 2 =
Remember me
