ಅಮರಾವತಿ:2024ರಲ್ಲಿ ನಡೆಯುವ ಆಂಧ್ರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಆಡಳಿತರೂಢ ವೈಎಸ್​ಆರ್​ ಕಾಂಗ್ರೆಸ್​ ವಿರುದ್ಧ ತೆಲುಗು ದೇಶಂ ಪಾರ್ಟಿ ಹಾಗೂ ಜನಸೇನಾ ಪಕ್ಷ ಒಟ್ಟಾಗಿ ಸ್ಪರ್ಧಿಸಲಿವೆ ಎಂದು ನಟ ಪವನ್​ ಕಲ್ಯಾಣ್​ ಘೋಷಿಸಿದ್ದಾರೆ.
ರಾಜಮಂಡ್ರಿಯಲ್ಲಿರುವ ರಾಜ ಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿ ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಚಂದ್ರಬಾಭು ನಾಯ್ಡು ಅವರನ್ನು ಭೇಟಿ ಮಾಡಿದ ಬಳಿಕ ಅವರು ಟಿಡಿಪಿ ಹಾಗೂ ಜನಸೇನಾ ಮೈತ್ರಿಯನ್ನು ಪ್ರಕಟಿಸಿದ್ದಾರೆ.
ಇದನ್ನೂ ಓದಿ:VIDEO| ಭಾರತ ಮೂಲದ ವ್ಯಕ್ತಿಯಿಂದ ಕೊರಿಯನ್​ ಯುಟ್ಯೂಬರ್​ಗೆ ಲೈಂಗಿಕ ಕಿರುಕುಳ
ಬಳಿಕ ಸುದ್ದಿಗೋಷ್ಠಿಯನ್ನುದ್ಧೇಶಿಸಿ ಮಾತನಾಡಿದ ನಟ ಪವನ್​ ಕಲ್ಯಾಣ್​ ವೈಎಸ್​ಆರ್​ ಕಾಂಗ್ರೆಸ್​ ದುರಾಡಳಿತವನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರಬಲ ಹೋರಾಟ ನಡೆಸಲಾಗುವುದು. ಹೀಗಾಗಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾವು ಮೈತ್ರಿ ಮಾಡಿಕೊಳ್ಳುತ್ತಿರುವುದಾಗಿ ಮಾಹಿತಿ ನೀಡಿದ್ದಾರೆ.
ಈ ವೇಳೆ ಟಿಡಿಪಿ ಕಾರ್ಯದರ್ಶಿ, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಪುತ್ರ ನಾರಾ ಲೋಕೇಶ್​, ತೆಲುಗು ನಟ, ಹಿಂದೂಪುರ ವಿಧಾನಸಭಾ ಕ್ಷೇತ್ರದ ಶಾಸಕ ನಂದಮೂರಿ ಬಾಲಕೃಷ್ಣ ಉಪಸ್ಥಿತಿರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 4 =
Remember me
