ಮಧ್ಯಪ್ರದೇಶ:ಜನಪದ ಪಂಚಾಯತ್ ಅಧ್ಯಕ್ಷೆ ಪೂಜಾ ದಾದು ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಭಾನುವಾರ (ಅ.1) ತಿಳಿಸಿದ್ದಾರೆ. ಈ ಘಟನೆ ಮಧ್ಯಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಸಿದ್ದರಾಮಯ್ಯ ಅವರಿಂದಲೇ ನೀವೆಲ್ಲ ಗೆದ್ದಿರುವುದು; ಶಾಮನೂರು ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಎಚ್. ವಿಶ್ವನಾಥ್
ಬುರ್ಹಾನ್‌ಪುರದ ತಮ್ಮ ನಿವಾಸದಲ್ಲಿ ಪೂಜಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಶವವನ್ನು ಆಸ್ಪತ್ರೆಗೆ ಸಾಗಿಸಿದ ಪೊಲೀಸರಿಗೆ, ವೈದ್ಯರು ಆಕೆ ಸಾವನ್ನಪ್ಪಿರುವ ಸಂಗತಿಯನ್ನು ದೃಢಪಡಿಸಿದ್ದಾರೆ. ಖಕ್ನಾರ್​ನ ಜನಪದ ಪಂಚಾಯತ್ ಅಧ್ಯಕ್ಷೆ ಮಾಜಿ ಬಿಜೆಪಿ ಶಾಸಕ (ನೇಪಾನಗರದಿಂದ) ದಿವಂಗತ ರಾಜೇಂದ್ರ ದಾದು ಅವರ ಮಗಳು ಎಂದು ಹೇಳಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸದ್ಯ ತನಿಖೆ ಆರಂಭಿಸಿದ್ದಾರೆ.
ಪ್ರಾಥಮಿಕ ತನಿಖೆಯಿಂದ ಇದು ಆತ್ಮಹತ್ಯೆ ಎಂದು ತಿಳಿದುಬಂದಿದೆ ಎಂದು ಹಿರಿಯ​ ಅಧಿಕಾರಿ ದೇವೇಂದ್ರ ಪಾಟಿದಾರ್ ಹೇಳಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಆಕೆಯ ನಿರ್ಧಾರದ ಹಿಂದಿನ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಮನೋಜ್ ಲಾಧ್ವೆ ಹೇಳಿದ್ದಾರೆ.
ಇದನ್ನೂ ಓದಿ:ಕಾರಿಡಾರ್ ಸುತ್ತಾಡಿ ಕಸಗೂಡಿಸಿದ ಡಿಸಿ ಫೌಜಿಯಾ ತರನ್ನುಮ್ : ಸಿಬ್ಬಂದಿ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಸಾಥ್
ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಆಕೆಯ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಲೋಕಸಭೆ ಸದಸ್ಯ ಜ್ಞಾನೇಶ್ವರ್ ಪಾಟೀಲ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿ, ಸಾಂತ್ವನ ತಿಳಿಸಿದ್ದಾರೆ,(ಏಜೆನ್ಸೀಸ್).
ಅಮೆರಿಕಾದಲ್ಲಿ ‘ಲಿಯೋ’ ಕಮಾಲ್​; ರಿಲೀಸ್​ಗೂ ಮುನ್ನವೇ ದಳಪತಿ ವಿಜಯ್​ ಚಿತ್ರಕ್ಕೆ ಸಿಕ್ತು ಭರ್ಜರಿ ರೆಸ್ಪಾನ್ಸ್​!​​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
