ನವದೆಹಲಿ:ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲಿನ ಗುಂಡಿನ ದಾಳಿಯನ್ನು ಖಂಡಿಸಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ನೇಹಿತನ ಈ ಸ್ಥಿತಿಗೆ ತೀವ್ರ ನೋವಾಗಿದೆ ಎಂದು ಹೇಳಿದ್ದಾರೆ.
ಶಿಂಜೋ ಅಧಿಕಾರವಧಿಯಲ್ಲಿ ಭಾರತದ ಜತೆ ಉತ್ತಮ ಬಾಂಧವ್ಯ ಹೊಂದಿದ್ದಲ್ಲದೇ, ಪ್ರಧಾನಿ ಮೋದಿ ಅವರ ಆತ್ಮೀಯ ಸ್ನೇಹಿತರೂ ಆಗಿದ್ದಾರೆ. ಸದ್ಯ ಗಂಭೀರ ಸ್ಥಿತಿಯಲ್ಲಿರುವ ಶಿಂಜೋ ಅವರ ಸ್ಥಿತಿಯ ಬಗ್ಗೆ ಮರುಗಿದ್ದಾರೆ.
ಈ ಕುರಿತು ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ನನ್ನ ಆತ್ಮೀಯ ಸ್ನೇಹಿತ ಶಿಂಜೋ ಅಬೆ ಮೇಲಿನ ದಾಳಿಯಿಂದ ತೀವ್ರವಾಗಿ ನೊಂದಿದ್ದೇನೆ. ದೇವರು ಅವರ ಆರೋಗ್ಯ ಚೇತರಿಸಿಕೊಳ್ಳುವಂತೆ ಮಾಡಲಿ, ನೀವು ಚೇತರಿಸಿಕೊಳ್ಳಿ ಎಂದು ಪ್ರಾರ್ಥಿಸುತ್ತೇವೆ. ನಿಮಮ ಕುಟುಂಬ ಹಾಗೂ ಜಪಾನ್​ ಜನತೆಯೂ ನಿಮ್ಮ ಜತೆಗಿದೆ ಎಂದು ಬರೆದಿದ್ದಾರೆ.
Deeply distressed by the attack on my dear friend Abe Shinzo. Our thoughts and prayers are with him, his family, and the people of Japan.
— Narendra Modi (@narendramodi)July 8, 2022

ಪಶ್ಚಿಮ ಭಾಗದ ನಗರ ನಾರಾದ ರೈಲು ನಿಲ್ದಾಣ ಸಮೀಪ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ 67 ವರ್ಷದ ಶಿಂಜೋ ಅಬೆ ಶುಕ್ರವಾರ ಬೆಳಗ್ಗೆ ಭಾಷಣ ಮಾಡುತ್ತಿದ್ದರು. ಈ ವೇಳೆ ಅವರ ಮೇಲೆ ಗುಂಡಿನ ದಾಳಿ ನಡೆದಿದೆ.
1982ರಲ್ಲಿ ಲಿಬರಲ್ ಡೆಮಾಕ್ರಟಿಕ್ ಪಾರ್ಟಿ ಸೇರಿದ ಶಿಂಜೋ ಅಬೆ, ವಿದೇಶಾಂಗ ಇಲಾಖೆಯಲ್ಲೂ ಕೆಲಸ ಮಾಡಿದ್ದಾರೆ. 2006ರ ಜುಲೈನಲ್ಲಿ ಪ್ರಧಾನಿ ಹುದ್ದೆ ಅಲಂಕರಿಸಿದ್ದರು. 52ನೇ ವಯಸ್ಸಿನಲ್ಲಿ ಪ್ರಧಾನಿ ಹುದ್ದೆಗೇರಿದ ಅಬೆ, ಆ ಮೂಲಕ ಅತಿ ಕಿರಿಯ ಪ್ರಧಾನ ಮಂತ್ರಿ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದ್ದರು. ಪ್ರಧಾನ ಮಂತ್ರಿಯಾಗಿ ಎರಡು ಅವಧಿಯನ್ನೂ ಪೂರ್ಣಗೊಳಿಸಿ, ಅನಾರೋಗ್ಯದ ಕಾರಣಕ್ಕಾಗಿ 2020ರಲ್ಲಿ ಪ್ರದಾನಿ ಸ್ಥಾನದಿಂದ ಕೆಳಗಿಳಿದಿದ್ದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + fifteen =
Remember me
