ಜಲ್ನಾ: ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದ ಬೀಡ್‌ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕದ ಮರಾಠರ ಮೇಲೆ ಹಲ್ಲೆ ನಡೆಸುತ್ತಿರುವ ಕೆಲವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆ ರಾಜ್ಯದ ಗೃಹ ಸಚಿವ ದೇವೇಂದ್ರ ಫಡ್ನವೀಸ್ ಅವರನ್ನು ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಭಾನುವಾರ ಒತ್ತಾಯಿಸಿದ್ದಾರೆ .
ಇದನ್ನೂ ಓದಿ:‘ವಿಜಯವಾಣಿ’ ಎಜುಕೇಷನ್ ಎಕ್ಸ್‌ಪೋನಿಂದ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲ: ಕೆ.ವೆಂಕಟೇಶ್
ಅಂತರವಾಲಿ ಸಾರಥಿ ಗ್ರಾಮದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದ ಎರಡನೇ ದಿನದಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಎನ್‌ಸಿಪಿ ಅಭ್ಯರ್ಥಿ ಬಜರಂಗ ಸೋನಾವಣೆ ವಿರುದ್ಧ ಸೋತ ಬಿಜೆಪಿಯ ಪಂಕಜಾ ಮುಂಡೆ ಅವರಿಗೆ ಮತ ಹಾಕದ ಕಾರಣಕ್ಕೆ ಬೀಡ್ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಮರಾಠಿಗರ ಮೇಲೆ ಹಲ್ಲೆ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.
ಇಂತಹ ಹಿಂಸಾಚಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರು ಹಾಗೂ ಬೀಡಿನ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಮಾಡಿದ ಅವರು, ಮರಾಠ ಯುವಕರು ಶಾಂತಿ ಮತ್ತು ಕೋಮು ಸೌಹಾರ್ದತೆ ಕಾಪಾಡುವಂತೆ ಒತ್ತಾಯಿಸಿದರು.
ಮರಾಠಾ ಹಿತಾಸಕ್ತಿಗಳನ್ನು ವಿರೋಧಿಸುವ ನಾಯಕರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಇದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಅವರು ಎ್ಚಚರಿಸಿದರು.
ಯುಕೆ ವಿದೇಶಿ ನೇರ ಹೂಡಿಕೆ: ಭಾರತದ ಮೊದಲ ಮೂರು ರಾಜ್ಯಗಳಲ್ಲಿ ಕರ್ನಾಟಕ! ಎಫ್​ಡಿಐ ಎಷ್ಟು?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 + 18 =
Remember me
