ತಿರುಪತಿ:ಪ್ರಸಿದ್ಧ ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದ ಆಡಳಿತ ನೋಡಿಕೊಳ್ಳುವ ತಿರುಮಲ ತಿರುಪತಿ ದೇವಸ್ಥಾನಮ್ಸ್ (ಟಿಟಿಡಿ)ನ ನೂತನ ಎಕ್ಸಿಕ್ಯೂಟಿವ್ ಆಫೀಸರ್ ಆಗಿ ಕೆ.ಎಸ್​.ಜವಾಹರ್ ರೆಡ್ಡಿ ಶನಿವಾರ ಅಧಿಕಾರ ಸ್ವೀಕರಿಸಿದ್ದಾರೆ.
ಸಡಗೋಪಮ್ ಸಮರ್ಪಣೆ
ಟಿಟಿಡಿ ಮಂಡಳಿ ಸದಸ್ಯ ಕೃಷ್ಣಮೂರ್ತಿ ವೈದ್ಯನಾಥನ್ ಅವರು 36 ಲಕ್ಷ ರೂಪಾಯಿ ಮೌಲ್ಯದ ಕಿರೀಟದಂತಹ ಸಡಗೋಪಮ್​ ಅನ್ನು ಇಂದು ದೇಗುಲಕ್ಕೆ ಸಮರ್ಪಿಸಿದರು.
ವಾರ್ಷಿಕ ಮೂರು ಸಾವಿರದ ಮುನ್ನೂರು ಕೋಟಿ ರೂಪಾಯಿಗೂ ಅಧಿಕ ಆದಾಯವಿರುವ ದೇವಸ್ಥಾನದ ಆಡಳಿತ ಮಂಡಳಿಯ ಎಕ್ಸಿಕ್ಯೂಟಿವ್ ಆಫೀಸರ್ ಆಗಿ ಅಧಿಕಾರ ಸ್ವೀಕರಿಸುವುದಕ್ಕೂ ಮುನ್ನ ಜವಾಹರ ರೆಡ್ಡಿ ಅವರು ಆಂಧ್ರಪ್ರದೇಶದ ವೈದ್ಯಕೀಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಶೇಷ ಮುಖ್ಯಕಾರ್ಯದರ್ಶಿ ಆಗಿದ್ದರು.
ಇದನ್ನೂ ಓದಿ:ಸಭೆಯಲ್ಲಿ ನೆಲದ ಮೇಲೆಯೇ ಕೂರಬೇಕು ಈ ಗ್ರಾಪಂ ಅಧ್ಯಕ್ಷೆ; ಉಪಾಧ್ಯಕ್ಷನಿಂದ ‘ಜಾತಿ’ ದೌರ್ಜನ್ಯ
ಈ ಹುದ್ದೆಯಲ್ಲಿ ರೆಡ್ಡಿ ಅವರು ಕನಿಷ್ಠ ಎರಡು ವರ್ಷ ಸೇವೆ ಸಲ್ಲಿಸಲಿದ್ದಾರೆ. ರಾಜ್ಯ ಸರ್ಕಾರ ಬುಧವಾರವಷ್ಟೇ ಎಕ್ಸಿಕ್ಯೂಟಿವ್ ಆಫೀಸರ್ ಆಗಿದ್ದ ಅನಿಲ್ ಕುಮಾರ್ ಸಿಂಘಾಲ್ ಅವರನ್ನು ವೈದ್ಯಕೀಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಿನ್ಸಿಪಾಲ್ ಸೆಕ್ರಟರಿಯಾಗಿ ವರ್ಗಾವಣೆ ಮಾಡಿತ್ತು. ಅವರು ಮೂರು ವರ್ಷ ಸೇವೆ ಸಲ್ಲಿಸಿದ್ದರು. (ಏಜೆನ್ಸೀಸ್)
ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡುತ್ತಿದ್ದಂತೆಯೇ ವೇದನೆಯೊಂದಿಗೆ ಕುಸಿದ ಚಿರಾಗ್​ ಪಾಸ್ವಾನ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
