ನವದೆಹಲಿ: ಜವಾಹರಲಾಲ್​ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ನಿಲಯದ ಶುಲ್ಕ ಹೆಚ್ಚಳ ಪ್ರಶ್ನಿಸಿ ಜೆಎನ್​ಯು ವಿದ್ಯಾರ್ಥಿ ಸಂಘ ದೆಹಲಿ ಹೈಕೋರ್ಟ್​ ಮೆಟ್ಟಿಲೇರಿದೆ.
ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಆಯಿಷೆ ಘೋಷ್ ಹಾಗೂ ಇತರ ಪದಾಧಿಕಾರಿಗಳು ಕೋರ್ಟ್​ಗೆ ಅರ್ಜಿ ಸಲ್ಲಿಸಿ, ಹಳೆಯ ಶುಲ್ಕ ರಚನೆಯ ಪ್ರಕಾರ ವಿದ್ಯಾರ್ಥಿಗಳ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ವಿವಿಗೆ ಕೋರ್ಟ್​ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಅಕ್ಟೋಬರ್ 2019 ರ ಸಭೆಯಲ್ಲಿ ವಿಶ್ವವಿದ್ಯಾನಿಲಯದ ಇಂಟರ್ ಹಾಸ್ಟೆಲ್ ಅಡ್ಮಿನಿಸ್ಟ್ರೇಷನ್ (ಐಎಚ್‌ಎ) ತೆಗೆದುಕೊಂಡ ನಿರ್ಧಾರಗಳು ಅನಿಯಂತ್ರಿತ ಮತ್ತು ಕಾನೂನುಬಾಹಿರ ಹಾಗೂ ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 10 =
Remember me
