ಬೆಂಗಳೂರು:ನಗರದ ವಿಶೇಷ ನ್ಯಾಯಾಲಯದ ಸುಪರ್ದಿಯಲ್ಲಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರು ಅಕ್ರಮವಾಗಿ ಗಳಿಸಿದ್ದ ಚಿನ್ನಾಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ನಗರದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ದಿನಾಂಕವನ್ನು ನಿಗದಿಪಡಿಸಿದೆ.
ಆರ್​ಟಿಐ ಕಾರ್ಯಕರ್ತ ಟಿ.ನರಸಿಂಹಮೂರ್ತಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನಗರದ 36ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು, 2024ರ ಮಾ.6 ಮತ್ತು 7ರಂದು ದಿನಾಂಕವನ್ನು ನಿಗದಿಪಡಿಸಿದ್ದು, ಆ ಎರಡು ದಿನಗಳಂದು ಇತರ ಪ್ರಕರಣಗಳ ವಿಚಾರಣೆ ನಡೆಸದಿರಲು ನಿರ್ಧರಿಸಿದೆ. ಅಲ್ಲದೆ, ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲು ಅಧಿಕೃತ ವ್ಯಕ್ತಿಯೊಬ್ಬರನ್ನು ನೇಮಕ ಮಾಡಿದ್ದು, ತಮಿಳುನಾಡು ಸರ್ಕಾರದ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ, ತಮಿಳುನಾಡು ಐಜಿಪಿ ಅವರೊಂದಿಗೆ ಬರಬೇಕು. ಈ ವೇಳೆ ಛಾಯಾಗ್ರಾಹಕರು, ವಿಡಿಯೋಗ್ರಾಫರ್ ಮತ್ತು 6 ಪೆಟ್ಟಿಗೆ ಜತೆಗೆ ಅಗತ್ಯ ಭದ್ರತೆಯೊಂದಿಗೆ ಬಂದು ಚಿನ್ನಾಭರಣಗಳನ್ನು ಪಡೆದುಕೊಳ್ಳಬೇಕು. ಈ ಅಂಶವನ್ನು ತಮಿಳುನಾಡು ಡಿವೈಎಸ್​ಪಿ ಅವರು ತಮಿಳುನಾಡು ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರ ಗಮನಕ್ಕೆ ತರಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ.
ಅಲ್ಲದೆ, ಈ ಸಂದರ್ಭದಲ್ಲಿ ಸಿವಿಲ್ ನ್ಯಾಯಾಲಯದಲ್ಲಿ ಎರಡು ದಿನಗಳ ಕಾಲ ಅಗತ್ಯವಿರುವ ಭದ್ರತೆಯನ್ನು ಸ್ಥಳೀಯ ಪೊಲೀಸರಿಂದ ಕಲ್ಪಿಸಲು ನ್ಯಾಯಾಲಯದ ರಿಜಿಸ್ಟ್ರಾರ್ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು 2024ರ ಮಾ.6ಕ್ಕೆ ಮುಂದೂಡಿದ್ದಾರೆ.
ಏನೆಲ್ಲಾ ವಸ್ತುಗಳಿವೆ?7.40 ಕೆಜಿ 468 ಬಗೆಯ ಚಿನ್ನ ಹಾಗೂ ವಜ್ರ ಖಚಿತ ಆಭರಣ, 700 ಕೆ.ಜಿ. ತೂಕದ ಬೆಳ್ಳಿ ಆಭರಣಗಳು, 740 ಜತೆ ದುಬಾರಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜಿರೇಟರ್, 10 ಟಿವಿ ಸೆಟ್, 8 ವಿಸಿಆರ್, 1 ವಿಡಿಯೋ ಕ್ಯಾಮರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್ ರೆಕಾರ್ಡರ್, 1040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್, 1.93 ಲಕ್ಷ ನಗದು ಸೇರಿ ಹಲವು ವಸ್ತುಗಳನ್ನು ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿತ್ತು.
ದಿನಕ್ಕೆ 2 ಲಕ್ಷ ರೂ. ಸಂಪಾದಿಸುವ ರೋಲ್ಸ್ ರಾಯ್ಸ್ ಕಾರಿಗೆ ಬಿತ್ತು 12 ಲಕ್ಷ ರೂ. ದಂಡ! ಕಾರಣ ಹುಬ್ಬೇರಿಸುವಂತಿದೆ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:nine + 9 =
Remember me
