ಚೆನ್ನೈ : ತಮಿಳುನಾಡಿನ ತೂತ್ತುಕುಡಿಯ ಜಯರಾಜ್ ಮತ್ತವರ ಮಗ ಬೆನ್ನಿಕ್ಸ್ ಪೊಲೀಸ್ ಕಸ್ಟಡಿ ಸಾವು ಪ್ರಕರಣದ ವಿಚಾರಣೆ ಆರಂಭಿಸಿರುವ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಮತ್ತು ಕೇಂದ್ರದಿಂದ ಅನುಮತಿ ಪಡೆದ ನಂತರ ಎರಡು ಎಫ್​ಐಆರ್​ಗಳನ್ನು ದಾಖಲಿಸಿದೆ.
ತನಿಖೆಗಾಗಿ ಸಿಬಿಐ ತಂಡವೊಂದನ್ನು ರಚಿಸಿದ್ದು, ಈ ತಂಡ ತಮಿಳುನಾಡಿಗೆ ಭೇಟಿ ನೀಡಲಿದೆ. ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲು ತಮಿಳುನಾಡು ಮುಖ್ಯಮಂತ್ರಿ ಮಾಡಿದ್ದ ಮನವಿ ಹಿನ್ನೆಲೆ ಕೇಂದ್ರ ತನಿಖೆಯನ್ನು ಸಿಬಿಐಗೆ ವಹಿಸಿದೆ. ಇದಕ್ಕೂ ಮೊದಲು ಕೇಂದ್ರೀಯ ತನಿಖಾ ಸಂಸ್ಥೆ ಪ್ರಕರಣ ಕೈಗೆತ್ತಿಕೊಳ್ಳುವವರೆಗೂ ನೀವೆ ತನಿಖೆ ಮುಂದುವರೆಸಿ ಎಂದು ಮದ್ರಾಸ್ ಹೈಕೋರ್ಟ್​ನ ಮಧುರೈ ನ್ಯಾಯಪೀಠ ಸಿಬಿ-ಸಿಐಡಿಗೆ ನಿರ್ದೇಶನ ನೀಡಿತ್ತು. ಪ್ರಕರಣ ಸಂಬಂಧ ಸಿಐಡಿ ಈವರೆಗೆ ಇನ್ಸ್​ಪೆಕ್ಟರ ಸೇರಿದಂತೆ ಐವರು ಪೊಲೀಸರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.
ಇದನ್ನೂ ಓದಿ:31ರ ತನಕ ಶಿಕ್ಷಕರಿಗೆ ವರ್ಕ್​ ಫ್ರಂ ಹೋಮ್ ಕೊಡಿ- ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ಆದೇಶ
ಲಾಕ್​ಡೌನ್ ವಿನಾಯಿತಿ ಅವಧಿ ನಂತರವೂ ಅಂಗಡಿ ತೆಗೆದಿದ್ದರು ಎಂಬ ಆರೋಪದ ಹಿನ್ನೆಲೆ ಪೊಲೀಸರು ಕಳೆದ ಜೂ.19ರಂದು ಜಯರಾಜ್ ಮತ್ತವರ ಮಗ ಬೆನ್ನಿಕ್ಸ್ ಅವರನ್ನು ಬಂದಿಸಿದ್ದರು. ಆದರೆ ಪೊಲೀಸರಿಂದ ಗಂಭೀರವಾಗಿ ಹಲ್ಲೆಗೊಳಗಾಗಿದ್ದ ಅವರು ನಾಲ್ಕು ದಿನಗಳ ಬಳಿಕ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಸಾವಿಗೆ ಪೊಲೀಸರು ನೀಡಿರುವ ಚಿತ್ರಹಿಂಸೆಯೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ಘಟನೆ ಕುರಿತು ಜಾಲತಾಣಗಳಲ್ಲಿ ದೊಡ್ಡ ಅಭಿಯಾನವೇ ನಡೆದಿತ್ತು. ಬಾಲಿವುಡ್ ಸ್ಟಾರ್​ಗಳು, ಕ್ರಿಕೇಟರ್​ಗಳು, ಸಾಮಾಜಿಕ ಹೋರಾಟಗಾರರು ಸೇರಿದಂತೆ ಸಹಸ್ರಾರು ಮಂದಿ ಪೊಲೀಸರ ದೌರ್ಜನ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಘಟನೆ ಸಂಬಂಧ ಇಬ್ಬರು ಎಸ್​ಐ ಸೇರಿದಂತೆ ನಾಲ್ವರು ಪೊಲೀಸರನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ. ಮುಖ್ಯಮಂತ್ರಿ ಪಳನಿಸ್ವಾಮಿ ಮೃತರ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ನೀಡಿದ್ದು, ಕುಟುಂಬದ ಓರ್ವ ಸದಸ್ಯರಿಗೆ ಉದ್ಯೋಗ ನೀಡುವ ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿ ಇಂದು ಹೊಸ ಕೋವಿಡ್​ 19 ಪ್ರಕರಣ 2062; ಮರಣ ಪ್ರಮಾಣ 54

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 5 =
Remember me
