ಬೆಂಗಳೂರು:ರಾಷ್ಟ್ರಪತಿ ಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ಜೆಡಿಎಸ್​ ಸರ್ವಾನುಮತದ ನಿರ್ಣಯ ಕೈಗೊಂಡಿದೆ. ಈ ವಿಷಯವನ್ನು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಟ್ವೀಟ್​ ಮೂಲಕ ಪ್ರಕಟಿಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಕೋವಿಡ್‌ ಪಾಸಿಟಿವ್‌ ಕಾರಣಕ್ಕೆ ನಾನು ವರ್ಚುಯಲ್‌ ವೇದಿಕೆ ಮೂಲಕ ಈ ಸಭೆಯಲ್ಲಿ ಪಾಲ್ಗೊಂಡಿದ್ದೆ ಎಂಬುದಾಗಿ ಅವರು ಹೇಳಿದ್ದಾರೆ.
ಎಚ್​.ಡಿ. ದೇವೇಗೌಡ ಅವರು ಪ್ರಧಾನಿಗಳಾಗಿದ್ದಾಗ ಮಹಿಳೆಯರಿಗೆ ಮೀಸಲು ಸೌಲಭ್ಯ ಕಲ್ಪಿಸುವ ಐತಿಹಾಸಿಕ ನಿರ್ಣಯ ಕೈಗೊಂಡಿದ್ದರು. ಪ್ರಪ್ರಥಮ ಬಾರಿಗೆ ಆದಿವಾಸಿ ಮಹಿಳೆಯೊಬ್ಬರು ಭಾರತದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಅಲಂಕರಿಸುತ್ತಿರುವುದು ಹೆಮ್ಮೆಯ ಸಂಗತಿ. ಇದು ಮಾಜಿ ಪ್ರಧಾನಮಂತ್ರಿಯವರ ಆಶಯವೂ ಹೌದು ಎಂದು ಅವರು ತಿಳಿಸಿದ್ದಾರೆ.
ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ತಮ್ಮ ಉಮೇದುವಾರಿಕೆ ಘೋಷಣೆಯಾದ ಮರುದಿನವೇ ದ್ರೌಪದಿ ಮುರ್ಮು ಅವರು ಹೆಚ್.ಡಿ. ದೇವೇಗೌಡರಿಗೆ ದೂರವಾಣಿ ಕರೆ ಮಾಡಿ ಬೆಂಬಲ ಕೋರಿದ್ದರು. ಬೆಂಗಳೂರಿಗೆ ಭೇಟಿ ನೀಡಿದ್ದಾಗ ಸ್ವತಃ ಅವರೇ ಗೌಡರ ನಿವಾಸಕ್ಕೆ ಭೇಟಿ ನೀಡಿ ಮತ ಕೇಳಿದ್ದರು.
ದ್ರೌಪದಿ ಮುರ್ಮು ಅವರ ವ್ಯಕ್ತಿತ್ವ, ಅವರ ಹಿನ್ನೆಲೆ ಹಾಗೂ ಅವರು ಪ್ರತಿನಿಧಿಸುವ ಸಮುದಾಯವನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ನಮ್ಮ ಪಕ್ಷ ಬೆಂಬಲ ಘೋಷಿಸಿದೆ. ಇಲ್ಲಿ ಪಕ್ಷಗಳ ಪ್ರಮೇಯವೇ ಇಲ್ಲ. ರಾಷ್ಟ್ರದ ಪರಮೋಚ್ಚ ಸಾಂವಿಧಾನಿಕ ಸ್ಥಾನ ರಾಷ್ಟ್ರಪತಿ ಪದವಿ. ಅದು ಪಕ್ಷ ರಾಜಕಾರಣದ ಚೌಕಟ್ಟನ್ನು ಮೀರಿದ ಹೊಣೆಗಾರಿಕೆ ಎಂದು ಬೆಂಬಲ ನೀಡುತ್ತಿರುವುದಕ್ಕೆ ಕಾರಣವನ್ನು ವಿವರಿಸಿದ್ದಾರೆ.
ನಮ್ಮ ಹೆಮ್ಮೆಯ ಮೂರು ಸೇನಾಪಡೆಗಳ ಮಹಾ ದಂಡನಾಯಕರಾಗಿ ಬುಡಕಟ್ಟು ಸಮುದಾಯದ ಓರ್ವ ಮಹಿಳೆಯೊಬ್ಬರು ಚುಕ್ಕಾಣಿ ಹಿಡಿಯುವುದು ಎಂದರೆ, ಅದು ಐತಿಹಾಸಿಕ ಗರಿಯೇ ಸರಿ. ಸಮಸ್ತ ಮಹಿಳೆಯರಿಗೆ ಮಾತ್ರವಲ್ಲ, ಭಾರತ ಒಪ್ಪಿಕೊಂಡಿರುವ ಪ್ರಜಾಸತ್ತೆಯ ಹೆಗ್ಗಳಿಕೆಯೂ ಹೌದು ಎನ್ನುವ ಮೂಲಕ ಎನ್​ಡಿಯ ಅಭ್ಯರ್ಥಿ ಆಯ್ಕೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇಷ್ಟಪಟ್ಟು ಪುರುಷನ ಜತೆಗಿದ್ದು, ಸಂಬಂಧ ಕೆಟ್ಟಾಗ ರೇಪ್​ ಆಯ್ತು ಅನ್ನೋ ಹಾಗಿಲ್ಲ: ಸುಪ್ರೀಂ ಕೋರ್ಟ್​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 5 =
Remember me
