ನವದೆಹಲಿ:ಕನ್ವರ್ ಯಾತ್ರಾ ಮಾರ್ಗದಲ್ಲಿ ಹೋಟೆಲ್‌ಗಳು ಮತ್ತು ತಿನಿಸು ಅಂಗಡಿಗಳ ಮುಂದೆ ನಾಮಫಲಕ ಹಾಕಬೇಕೆಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರಗಳು ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಂತರ ತಡೆ ನೀಡಿದ್ದಕ್ಕೆ ಪ್ರತಿಪಕ್ಷಗಳು ಸಂತಸ ವ್ಯಕ್ತಪಡಿಸಿದ್ದರೆ, ಬಿಜೆಪಿ ನೇತೃತ್ವದ ಎನ್‌ಡಿಎ ಪ್ರಮುಖ ಪಾಲುದಾರ ಜನತಾ ದಳ ಯುನೈಟೆಡ್ (ಜೆಡಿಯು) ಕೂಡ ತೀರ್ಪನ್ನು ಸ್ವಾಗತಿ ಅಚ್ಚರಿ ಮೂಡಿಸಿದೆ.
ಇದನ್ನೂ ಓದಿ:ನೀಟ್ ಪರೀಕ್ಷೆ ಪತ್ರಿಕೆ ಸೋರಿಕೆಗೆ ಶಿಕ್ಷಣ ಸಚಿವರೇ ಹೊಣೆ: ಸಂಸತ್​ ಕಲಾಪದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ
ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ನ್ಯಾಯಮೂರ್ತಿ ಎಸ್‌ಪಿಎಸ್ ಭಟ್ಟಿ ಅವರನ್ನೊಳಗೊಂಡ ಪೀಠವು ಯುಪಿ ಮತ್ತು ಉತ್ತರಾಖಂಡ ಸರ್ಕಾರಗಳ ಆದೇಶ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದ್ದು, ಆಹಾರ ಮಾರಾಟಗಾರರನ್ನು ಅಂಗಡಿಗಳಲ್ಲಿ ಮಾಲೀಕರು ಮತ್ತು ಉದ್ಯೋಗಿಗಳ ಹೆಸರನ್ನು ಪ್ರದರ್ಶಿಸಲು ಒತ್ತಾಯಿಸಬಾರದು ಎಂದು ಸ್ಪಷ್ಟಪಡಿಸಿದೆ. ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಜೆಡಿಯು ವಕ್ತಾರ ಕೆ.ಸಿ.ತ್ಯಾಗಿ ಸ್ವಾಗತಿಸಿದ್ದಾರೆ.
ಸರಕಾರದಿಂದ ಸಮಾಜ ಒಡೆಯುವ ಆದೇಶ ಬರುತ್ತಿದೆ ಎಂಬ ಆತಂಕ ಜನರಲ್ಲಿದೆ. ಈ ಅಂಶವನ್ನು ಪರಿಗಣಿಸಿದ್ದಕ್ಕಾಗಿ ಸುಪ್ರೀಂ ಕೋರ್ಟ್‌ಗೆ ಧನ್ಯವಾದ ತಿಳಿಸುವುದಾಗಿ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇವೆ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಹೇಳಿದ್ದಾರೆ. ಯೋಗಿ ಸರ್ಕಾರ ನೀಡಿರುವ ಆದೇಶಗಳು ಅಸಾಂವಿಧಾನಿಕ ಎಂದು ಕಾಂಗ್ರೆಸ್ ಸೇರಿದಂತೆ ಹಲವು ವಿರೋಧ ಪಕ್ಷಗಳು ಹೇಳಿವೆ. ಪ್ರಧಾನಿಯವರು ತಮ್ಮ ಮುಖ್ಯಮಂತ್ರಿಗಳಿಗೆ ರಾಜಧರ್ಮದ ಬಗ್ಗೆ ವಿವರಿಸುತ್ತಾರೆಯೇ? ಅಸಂವಿಧಾನಿಕ ಕಾರ್ಯಗಳನ್ನು ತಡೆಯುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.
ಶಿವಸೇನಾ (ಯುಬಿಟಿ) ಸಂಸದ ಅರವಿಂದ್ ಸಾವಂತ್ ಸಹ ತೀರ್ಪನ್ನು ತಮ್ಮ ಪಕ್ಷ ಸ್ವಾಗತಿಸುತ್ತದೆ. ಆಡಳಿತಾರೂಢ ಬಿಜೆಪಿ ಈ ರೀತಿಯ ಅವನತಿ ರಾಜಕಾರಣ ಮಾಡುತ್ತಿದೆ ಎಂದು ಹೇಳಿದ್ದಾರೆ.
ದೇಶದ ಜನಪ್ರಿಯ ನಟ ಪ್ರಭಾಸ್​! ನಂತರದ ಸ್ಥಾನಗಳಲ್ಲಿ ಯಾರಿದ್ದಾರೆ? ಇಲ್ಲಿದೆ ಸಂಪೂರ್ಣ ಮಾಹಿತಿ..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen − five =
Remember me
