ನವದೆಹಲಿ:ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ಮುಂದೂಡುವುದಕ್ಕೆ ಸಾಧ್ಯವಿಲ್ಲ. ಪರೀಕ್ಷೆಯು ನಿಗದಿತ ದಿನದಂದೇ ನಡೆಯಲಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಪರೀಕ್ಷೆ ಮುಂದೂಡುವಂತೆ ಬಿಜೆಪಿಯೇತರ ಆರು ರಾಜ್ಯಗಳು ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಪರೀಕ್ಷೆ ಮುಂದೂಡಿಕೆ ಕೋರಿ ಈ ಹಿಂದೆಯೂ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಆಗಸ್ಟ್ 17ರಂದು ಈ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ನಿಗದಿತ ದಿನಾಂಕದಂದು ಪರೀಕ್ಷೆ ನಡೆಸುವಂತೆ ಆದೇಶಿಸಿತ್ತು. ನ್ಯಾಯಾಲಯ ಈ ತೀರ್ಪನ್ನು ಪರಿಷ್ಕರಿಸಬೇಕು ಎಂದು ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಪಂಜಾಬ್, ರಾಜಸ್ಥಾನ, ಜಾರ್ಖಂಡ ಮತ್ತು ಪುದುಚೆರಿ ಸರ್ಕಾರ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದವು. ಶುಕ್ರವಾರ ಈ ಅರ್ಜಿಗಳನ್ನೂ ವಜಾಗೊಳಿಸಲಾಗಿದೆ.
ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಬಿ.ಆರ್. ಗವಾಯ್ ಮತ್ತು ಕೃಷ್ಣ ಮುರಾರಿ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠ, ಈ ಅರ್ಜಿಯಲ್ಲಿ ಯಾವುದೇ ಮಹತ್ವವಿಲ್ಲ ಎಂದು ತಿಳಿಸಿದೆ. ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ದೇಶಾದ್ಯಂತ ಹಲವು ಸಂಘಟನೆಗಳು ಮತ್ತು ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.
ಜೆಇಇ ಪರೀಕ್ಷೆಯು ಸೆ.1ರಂದು ಆರಂಭವಾಗಿದ್ದು, 6ರವರೆಗೆ ನಡೆಯಲಿದೆ. ನೀಟ್ ಪರೀಕ್ಷೆಯು ಸೆ.13ರಂದು ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.
ಎಲ್ಲ ಮುಂಜಾಗ್ರತಾ ಕ್ರಮಗಳೊಂದಿಗೆ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಜೆಇಇ ಪರೀಕ್ಷೆಗೆ ದೇಶಾದ್ಯಂತ 8.58 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರಲ್ಲಿ 7.78 ಲಕ್ಷ ವಿದ್ಯಾರ್ಥಿಗಳು ಪ್ರವೇಶ ಪತ್ರ ಪಡೆದುಕೊಂಡಿದ್ದಾರೆ.
ನೀಟ್ ಪರೀಕ್ಷೆಗೆ 16 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಅದರಲ್ಲಿ 12.75 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಪಡೆದುಕೊಂಡಿದ್ದಾರೆ.
ಅಗತ್ಯ ಮುನ್ನೆಚ್ಚರಿಕೆ
ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳು ನೀರಿನ ಬಾಟಲಿ ಮತ್ತು ಸ್ಯಾನಿಟೈಸರ್ ತರುವಂತೆ ಸೂಚಿಸಲಾಗಿದೆ. ಪರೀಕ್ಷೆ ಬರೆಯುವ ಸಮಯದಲ್ಲಿ ಮಾಸ್ಕ್ ಮತ್ತು ಗ್ಲೌಸ್ ಬಳಕೆಯನ್ನು ಕಡ್ಡಾಯ ಮಾಡಲಾಗಿದೆ. ಪ್ರತಿ ವಿದ್ಯಾರ್ಥಿ ಪರೀಕ್ಷೆ ಬರೆಯುವುದಕ್ಕೆ ತೆರಳುವ ಮೊದಲು ಸೋಪಿನಿಂದ ಕೈ ತೊಳೆದುಕೊಳ್ಳುವಂತೆ ನೋಡಿಕೊಳ್ಳಲಾಗುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 12 =
Remember me
