ರಾಂಚಿ:ಇತ್ತೀಚೆಗೆ ಜಾರ್ಖಂಡ್​ನಲ್ಲಿ ಬಯಲಾದ ಹೈ ಫ್ರೊಫೈಲ್​​ ಹಗರಣದಲ್ಲಿ ಬಂಧನಕ್ಕೊಳಗಾದ ಐಎಎಸ್​ ಮಹಿಳಾ ಅಧಿಕಾರಿಯನ್ನು ಅಮಾನತುಗೊಳಿಸಿ ನಾಲ್ಕು ದಿನಗಳ ಕಾಲ ಇಡಿ ವಶಕ್ಕೆ ನೀಡಲಾಗಿದೆ.
ಸೋಮವಾರ ಸ್ಥಳೀಯ ನ್ಯಾಯಾಲಯ ಅಮಾನತು ಆದೇಶ ಹೊರಡಿಸಿದ್ದು, ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶನಾಲಯ ವಿಚಾರಣೆಗೊಳಪಡಿಸಲಿದೆ. ಸರ್ಕಾರದ ಯೋಜನೆಯಲ್ಲಿ ಕೋಟ್ಯಂತರ ರೂ. ಹಗರಣ ಬೆಳಕಿಗೆ ಬಂದಿತ್ತು. ದಾಳಿ ವೇಳೆ ಸುಮಾರು 18 ಕೋಟಿ ರೂ. ಜಪ್ತಿ ಮಾಡಲಾಗಿತ್ತು.
ಸದ್ಯ ಅಧಿಕಾರಿ ಪೂಜಾ ಸಿಂಘಾಲ್​ ಹಾಗೂ ಸಿಎ ಸುಮನ್​ ಕುಮಾರ್​ನನ್ನು ಅಮಾನತುಗೊಳಿಸಿ, ಜಾರಿ ನಿರ್ದೇಶನಾಲಯದ ಹೆಚ್ಚಿನ ವಿಚಾರಣೆಗೊಳಪಡಿಸಲಿದೆ.
ಪ್ರಕರಣ ಸಂಬಂಧ ಡಿಜಿಟಲ್​ ಸಾಕ್ಷ್ಯವನ್ನು ಇಡಿ ಈಗಾಗಲೇ ಸಂಗ್ರಹಿಸಿದೆ. ಪೂಜಾ ಸಿಂಘಾಲ್​ ಗಣಿಗಾರಿಕೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಹಗರಣ ಬೆಳಕಿಗೆ ಬರುತ್ತಿದ್ದಂತೆ ಮೇ 12 ರಂದು ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸಿತ್ತು.
ಕುಂತಿ ಜಿಲ್ಲೆಗೆ ನೀಡಲಾಗಿದ್ದ ಮನ್ರೇಗಾ ಹಣವನ್ನು ದುರ್ಬಳಕೆ ಮಾಡಿದ ಆರೋಪ ಇವರ ಮೇಲಿದೆ. ಈ ಪ್ರಕರಣದಲ್ಲಿ ದೊಡ್ಡ ದೊಡ್ಡ ಅಧಿಕಾರಿಗಳೇ ಶಾಮೀಲಾಗಿದ್ದು, ಈಗಾಗಲೇ ಬಂಧನಕ್ಕೊಳಗಾಗಿದ್ದಾರೆ.
2020ರಲ್ಲಿ ಸಣ್ಣ ಪ್ರಮಾಣದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿತ್ತು. ಆಗ ಓರ್ವ ಇಂಜಿನಿಯರ್​ನನ್ನು ಬಂಧಿಸಿ, ಇಲ್ಲಿನ ಪೊಲೀಸರು ಕೈ ತೊಳೆದುಕೊಂಡಿದ್ದರು. ಇದೀಗ ದೊಡ್ಡ ಕುಳಗಳ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.(ಏಜೆನ್ಸೀಸ್​)
ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾದ ಜಾಗವನ್ನು ಸೀಲ್ ಮಾಡಿ ಎಂದ ಕೋರ್ಟ್​

ಹೀಗೊಂದು ಕಾನೂನಿದೆ: ಸ್ಮಾರಕದ ಇಟ್ಟಿಗೆ ಒಡೆದು ಹಾಕಿದ ಬ್ರಿಟೀಷ್​ ಭೂ ವಿಜ್ಞಾನಿಗೆ ಮರಣದಂಡನೆ ಶಿಕ್ಷೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
