ಅಮರಾವತಿ:ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಹುಬ್ಬಳ್ಳಿಯ ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ ನೆನಪು ಮಾಸುವ ಮುನ್ನವೇ ಇದೀಗ ಅದೇ ರೀತಿಯ ಘಟನೆಯೊಂದು ಆಂಧ್ರಪ್ರದೇಶದ ಏಳೂರು ಜಿಲ್ಲೆಯಲ್ಲಿ ನಡೆದಿದ್ದು, ಜನರನ್ನು ಭಯಭೀತರನ್ನಾಗಿಸಿದೆ. ತನ್ನನ್ನು ಪ್ರೀತಿಸಲು ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೋರ್ವ ಯುವತಿಯನ್ನು ಬರ್ಬರವಾಗಿ ಇರಿದು ಕೊಲೆ ಮಾಡಿದ್ದು, ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.
ಬಂಧಿತ ಆರೋಪಿಯನ್ನು ಏಸುರತ್ನಂ (23) ಎಂದು ಗುರುತಿಸಲಾಗಿದ್ದು, ಮೃತ ದುರ್ದೈವಿಯನ್ನು ಜಕ್ಕು ರತ್ನ ಗ್ರೇಸ್​ (22) ಎಂದು ಗುರುತಿಸಲಾಗಿದೆ. ಹತ್ಯೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಆರೋಪಿಯನ್ನು ಗಲ್ಲಿಗೇರಿಸುವಂತೆ ನೆಟ್ಟಿಗರು ಆಗ್ರಹಿಸುತ್ತಿದ್ದಾರೆ.
ಇದನ್ನೂ ಓದಿ:ಪೊಲೀಸರೊಂದಿಗೆ ಖ್ಯಾತ ನಟಿಯ ಕಿರಿಕ್​; ಇದು ನಿಜಾನಾ ಅಥವಾ ಪಬ್ಲಿಸಿಟಿ ಗಿಮಿಕಾ​ ಎಂದು ಪ್ರಶ್ನಿಸಿದ ನೆಟ್ಟಿಗರು
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮೇರಿ ಪ್ರಶಾಂತಿ, ಆರೋಪಿ ಹಾಗೂ ಮೃತ ಯುವತಿ ಸಹಪಾಠಿಗಳಾಗಿದ್ದು, ಹಲವು ದಿನಗಳಿಂದ ತನ್ನನ್ನು ಪ್ರೀತಿಸುವಂತೆ ಆರೋಪಿ ಆಕೆಯ ಬೆನ್ನು ಬಿದ್ದಿದ್ದ. ಯುವತಿ ಇದಕ್ಕೆ ಒಪ್ಪಿರಲಿಲ್ಲ. ಇದರಿಂದ ಕುಪಿತಗೊಂಡ ಆರೋಪಿಯು ಗುರುವಾರ (ಮೇ 30) ಆಕೆಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ವಿಚಾರ ತಿಳಿಸಿ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆರೋಪಿಯ ಸ್ಥಿತಿ ಚಿಂತಾಜನಕವಾಗಿದ್ದು, ವೈದ್ಯರು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡುತ್ತಿದ್ದಾರೆ. ಸಂತ್ರಸ್ತೆಯ ಕುಟುಂಬಸ್ಥರಿಂದ ಮಾಹಿತಿ ಕಲೆಹಾಕಲಾಗುತ್ತಿದ್ದು, ತನಿಖೆ ಪೂರ್ಣಗೊಂಡ ಬಳಿಕ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮೇರಿ ಪ್ರಶಾಂತಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
