ನವದೆಹಲಿ:ಭಾರತದಲ್ಲಿ 2021ರ ದ್ವಿತೀಯಾರ್ಧದಲ್ಲಿ ಜಿಯೋ 5ಜಿ ತಂತ್ರಜ್ಞಾನ ಲಭ್ಯವಾಗಲಿದೆ ಎಂದು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ತಿಳಿಸಿದ್ದಾರೆ. ಮೊಬೈಲ್ ಕಾಂಗ್ರೆಸ್ 2020ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಮ್ಮ ನಾಲ್ಕು ಕಲ್ಪನೆಗಳು ಭಾರತದ ಡಿಜಿಟಲ್ ರೂಪಾಂತರಕ್ಕೆ ಸಹಾಯ ಮಾಡುತ್ತವೆ. ಇವುಗಳ ಕೇಂದ್ರ ಬಿಂದು ಭಾರತದಲ್ಲಿ 5ಜಿ ತಂತ್ರಜ್ಞಾನವನ್ನು ತರುವುದು ಎಂದಿದ್ದಾರೆ.
ಭಾರತವು ಇಂದು ವಿಶ್ವದ ಅತ್ಯುತ್ತಮ ಡಿಜಿಟಲ್ ಸಂಪರ್ಕ ಹೊಂದಿದ ರಾಷ್ಟ್ರಗಳಲ್ಲಿ ಒಂದಾಗಿದೆ. ಈ ಮುನ್ನಡೆ ಕಾಯ್ದುಕೊಳ್ಳಲು ಸರ್ಕಾರವು ಪ್ರಮುಖ ಉತ್ತಮ ನೀತಿ, ಕ್ರಮಗಳನ್ನು ತುರ್ತಾಗಿ ಅಳವಡಿಸಿಕೊಳ್ಳುವ ಅಗತ್ಯವಿದೆ. ಇದರಿಂದ ಸುಮಾರು 30 ಕೋಟಿಗೂ ಹೆಚ್ಚು ಜನರೊಂದಿಗೆ ಸಂಪರ್ಕ ಬೆಳೆಸಲು ಸಹಾಯವಾಗುತ್ತದೆ. ಭಾರತದ ಮುಂದಿನ ಪೀಳಿಗೆಗೆ 5ಜಿ ಸಂಪರ್ಕವನ್ನು ವೇಗವಾಗಿ ಲಭ್ಯಗೊಳಿಸಲು ಸರ್ಕಾರದ ಸಹಾಯವೂ ಅವಶ್ಯಕ ಎಂದಿದ್ದಾರೆ.
ಮುಂದಿನ ಮೂರು ವರ್ಷಗಳಲ್ಲಿ ಎಲ್ಲ ಹಳ್ಳಿಗಳಿಗೂ ಹೈಸ್ಪೀಡ್ ಇಂಟರ್​ನೆಟ್ ಲಭ್ಯವಾಗಲಿದೆ. ಕರೊನಾ ಲಸಿಕೆಯ ವಿತರಣೆಗೆ ಪ್ರಕ್ರಿಯೆಯಲ್ಲಿ ಮೊಬೈಲ್ ತಂತ್ರಜ್ಞಾನ ಸಮರ್ಪಕವಾಗಿ ಬಳಕೆಯಾಗಲಿದೆ. ಮೊಬೈಲ್ ತಂತ್ರಜ್ಞಾನದ ಸಹಾಯದಿಂದ ನಾವು ವಿಶ್ವದ ಅತಿದೊಡ್ಡ ವ್ಯಾಕ್ಸಿನೇಷನ್ ಯೋಜನೆಯನ್ನು ಪ್ರಾರಂಭಿಸುತ್ತೇವೆ.
|ನರೇಂದ್ರ ಮೋದಿಪ್ರಧಾನಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − four =
Remember me
