ಶ್ರೀನಗರ:ದೆಹಲಿಯಲ್ಲಿ ಪ್ರಧಾನಿ ಮೋದಿ ಅವರು ಭಾರತದ ಇತಿಹಾಸದಲ್ಲಿ ಸತತ 3 ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನೆಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರು ಅಟ್ಟಹಾಸ ಮರೆದಿದ್ದಾರೆ.
ಇದನ್ನೂ ಓದಿ:ಮೋದಿ 3.0 ಟೀಂ ರೆಡಿ: ಪ್ರಧಾನಿ ನರೇಂದ್ರ ಮೋದಿ ಜೊತೆ 72 ಸಚಿವರ ಪ್ರಮಾಣ ವಚನ..ಇಲ್ಲಿದೆ ಪಟ್ಟಿ
ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾನುವಾರ ಸಂಜೆ ಯಾತ್ರಾರ್ಥಿಗಳಿದ್ದ ಬಸ್‌ ಕಂದಕಕ್ಕೆ ಉರುಳಿದ್ದು, ಇದಕ್ಕೂ ಮುನ್ನ ಬಸ್​ಗೆ ಉಗ್ರಗಾಮಿಗಳು ಗುಂಡು ಹಾರಿಸಿದ್ದಾರೆ. ಈ ಅವಘಡದಲ್ಲಿ 10ಕ್ಕೂ ಹೆಚ್ಚು ಭಕ್ತರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಶಿವಖೋರಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದ ಯಾತ್ರಾರ್ಥಿ ಬಸ್. ಪೋನಿ ಪ್ರದೇಶದ ತೆರಯತ್ ಗ್ರಾಮದಲ್ಲಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯ ಅನೇಕ ಸಾವುನೋವುಗಳು ಸಂಭವಿಸುವ ಸಾಧ್ಯತೆ ಇದೆ.
ಬಸ್ ಶಿವಖೋರಾ ದೇವಸ್ಥಾನದಿಂದ ಕತ್ರಾಕ್ಕೆ ಹಿಂತಿರುಗುತ್ತಿದ್ದಾಗ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ರಜೌರಿ, ಪೂಂಚ್ ಮತ್ತು ರಿಯಾಸಿಯ ಮೇಲ್ಭಾಗದಲ್ಲಿ ಅಡಗಿರುವ ಅದೇ ಭಯೋತ್ಪಾದಕರ ಗುಂಪು ಈ ದಾಳಿ ನಡೆಸಿದೆ ಎಂದು ತಿಳಿದು ಬಂದದೆ. ಈವರೆಗೂ ಹಲವರನ್ನು ರಕ್ಷಿಸಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ರಿಯಾಸಿ ಜಿಲ್ಲೆಯ ಜಿಲ್ಲಾಧಿಕಾರಿ ವಿಶೇಷ್ ಮಹಾಜನ್ ತಿಳಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಹೆಚ್ಚುವರಿ ಭದ್ರತಾ ಪಡೆಗಳನ್ನು ರವಾನಿಸಲಾಗಿದೆ. ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಪ್ರಗತಿಯಲ್ಲಿದೆ.
“ಹರದನಹಳ್ಳಿ ಕುಮಾರಸ್ವಾಮಿ ಎಂಬುವವನಾದ ನಾನು…ಮೋದಿ ಮಂತ್ರಿ ಮಂಡಲ ಸೇರಿದ HDK!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 18 =
Remember me
