ಶ್ರೀನಗರ:ಈರುಳ್ಳಿ ತುಂಬಿಕೊಂಡು ವೇಗವಾಗಿ ಬರುತ್ತಿದ್ದ ಬೃಹತ್​ ಟ್ರಕ್​ ಒಂದು ಎದುರಿಗೆ ಬರುತ್ತಿದ್ದ ಕಾರು ಮತ್ತು ಬೈಕ್​ಗೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಘಟನೆ ಜಮ್ಮ ಮತ್ತು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮೂಲಗಳ ಪ್ರಕಾರ ಸಾಂಬಾ ಜಿಲ್ಲೆಯಲ್ಲಿ ಫೆ. 23ರಂದು ಈ ಅವಘಡ ಸಂಭವಿಸಿದೆ. ಜಮ್ಮು-ಪಠಾಣ್​ಕೋಟ್​ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಟ್ರಕ್,​ ಕಾರು ಮತ್ತು ಬೈಕ್​ಗೆ ಡಿಕ್ಕಿ ಹೊಡೆದು ಒಂದು ಬದಿಗೆ ಉರುಳಿ ಬಿದ್ದಿದೆ.
ಈ ಭಯಾನಕ ಘಟನೆ ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲೂ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಕಾರಿನಲ್ಲಿದ್ದ ಏರ್​ ಬ್ಯಾಗ್​ ತೆರೆದುಕೊಂಡಿದ್ದರಿಂದ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ವಾಹನಗಳೆರಡರ ಚಾಲಕರನ್ನು ರಕ್ಷಿಸಿದ್ದಾರೆ. ಈ ವೇಳೆ ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿತ್ತಷ್ಟೆ. ಆದರೆ, ವಿಡಿಯೋದಲ್ಲಿ ಅಪಘಾತದ ತೀವ್ರತೆ ಭಯ ಹುಟ್ಟಿಸುವಂತಿದೆ. ಈ ಸಂಬಂಧ ದೂರು ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.(ಏಜೆನ್ಸೀಸ್​)
#WATCHJammu and Kashmir: An onion laden truck rams into a car and a bike after driver loses control of the truck while taking a turn on the Jammu-Pathankot National Highway in Samba. All the people involved in the incident sustained minor injuries. (23.02.20)pic.twitter.com/OiKd4MxUY6
— ANI (@ANI)February 26, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
