ನವದೆಹಲಿ:ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ(ಜೆಎನ್‌ಯು) ಕ್ಯಾಂಪಸ್‌ನಲ್ಲಿ ವ್ಯಕ್ತಿಯೊಬ್ಬ ನಗ್ನವಾಗಿ ಕಾಣಿಸಿಕೊಂಡು, ಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಜಾಗರೂಕರಾಗಿರಲು ಆಡಳಿತ ಸಲಹೆ ನೀಡಿದೆ.
ಇದನ್ನೂ ಓದಿ:‘ಭಾರತ ಹೆಲಿಕಾಪ್ಟರ್​, ಸಿಬ್ಬಂದಿ ಮೇಲೆ ಇನ್ನು ನಮ್ಮದೇ ನಿಯಂತ್ರಣ’: ಮಾಲ್ಡೀವ್ಸ್​
ಜೆಎನ್‌ಯು ಆಡಳಿತ ಬ್ಲಾಕ್‌ನ ಪಕ್ಕದ ಬಸ್ ನಿಲ್ದಾಣದ ಬಳಿ ಅಪರಿಚಿತ ಬಟ್ಟೆಗಳನ್ನು ಬಿಚ್ಚಿ ಅನುಚಿತ ವರ್ತನೆಯಲ್ಲಿ ತೊಡಗಿದ್ದು, ವಿದ್ಯಾರ್ಥಿಗಳು ಭಯಭೀತರಾಗಿದ್ದರು. ಹೆಣ್ಣು ಮಕ್ಕಳಂತೂ ಕಣ್ಣುಮುಚ್ಚಿಕೊಂಡು ಸಂಚರಿಸಬೇಕಾಯಿತು. ಇನ್ನು ಕೆಲವರು ಆ ಮಾರ್ಗದಲ್ಲಿ ವಾಪಸ್​ ಹೋಗುತ್ತಿದ್ದ ದೃಶ್ಯ ಗುರುವಾರ ಸಾಮಾನ್ಯವಾಗಿತ್ತು.
ಅಪರಿಚಿತನನ್ನು ವಿವಸ್ತ್ರಗೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿಗಳು ಗಮನಿಸಿದ್ದಾರೆ. ಆತ ಮಹಿಳೆಯರನ್ನು ತದೇಕಚಿತ್ತದಿಂದ ದಿಟ್ಟಿಸುತ್ತ ಅಶ್ಲೀಲ ವರ್ತನೆಯಲ್ಲಿ ತೊಡಗಿದ್ದ. ಇದು ಭದ್ರತಾ ಶಾಖೆಯ ಗಮನಕ್ಕೆ ಬಂದಿದೆ. ವಿಶ್ವವಿದ್ಯಾಲಯವು ಇದನ್ನು ತೀವ್ರ ಖಂಡನೆ ವ್ಯಕ್ತಪಡಿಸಿ ಹೇಳಿಕೆ ಬಿಡುಗಡೆ ಮಾಡಿದೆ. ಈ ಆಕ್ರಮಣಕಾರಿ ಕೃತ್ಯವನ್ನು ನಾವು ಬಲವಾಗಿ ಖಂಡಿಸುತ್ತೇವೆ” ಎಂದು ಪ್ರತಿಪಾದಿಸಿದೆ.
ಇದೊಂದು ದುರಾದೃಷ್ಟಕರ ನಡುವಳಿಕೆಯಾಗಿದೆ. ಇಂತಹ ನಡವಳಿಕೆ ನಮ್ಮ ಗಮನಕ್ಕೆ ಬಂದ ತಕ್ಷಣ, ಅಸಭ್ಯ ವರ್ತನೆ ತೋರಿದ ವ್ಯಕ್ತಿಯನ್ನು ಗುರುತಿಸಿ ಕ್ರಮ ಕೈಗೊಳ್ಳಲು ಅಗತ್ಯ ಕ್ರಮಗಳನ್ನು ಪ್ರಾರಂಭಿಸಿದೆ ಜೆಎನ್​ಯು ಆಡಳಿತ ಹೇಳಿಕೆಯಲ್ಲಿ ತಿಳಿಸಿದೆ.
ಕಾನೂನು ಜಾರಿ ಸಂಸ್ಥೆಗಳ ಸಹಯೋಗದೊಂದಿಗೆ ವಿಶ್ವವಿದ್ಯಾನಿಲಯದ ಆಡಳಿತವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕ್ರಮಕ್ಕೆ ಮುಂದಾಗಲಿದೆ. ವಿದ್ಯಾರ್ಥಿಗಳು ಜಾಗರೂಕರಾಗಿರಬೇಕು. ಯಾವುದೇ ಅನುಮಾನಾಸ್ಪದ ಚಟುವಟಿಕೆ ಅಥವಾ ವ್ಯಕ್ತಿಯನ್ನು ಕಂಡ ಕೂಡಲೇ ಭದ್ರತಾ ಶಾಖೆಗೆ ತಿಳಿಸಲು ಸೂಚಿಸಲಾಗಿದೆ.
ಸಿಬಿಎಸ್​ಇ ಪ್ರಾಯೋಗಿಕ ಪರೀಕ್ಷೆ ಆಂತರಿಕ ಮೌಲ್ಯಮಾಪನ ಗಡುವು ವಿಸ್ತರಣೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + fourteen =
Remember me
