ನವದೆಹಲಿ:ಮಂಡಿ ಹೌಸ್​ನಲ್ಲಿ ಪ್ರತಿಭಟನೆ ನಡೆಸಿ, ರಾಷ್ಟ್ರಭವನದತ್ತ ಹೊರಟ ಜೆಎನ್​ಯು ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ.
ಮಾರ್ಗ ಮಧ್ಯದಲ್ಲಿ ಪೊಲೀಸರು ಕಾರು ಮತ್ತು ಬ್ಯಾರಿಕೇಡ್​ಗಳನ್ನು ಅಡ್ಡ ಹಾಕಿ ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಈ ವೇಳೆ ಕೆಲ ವಿದ್ಯಾರ್ಥಿಗಳು ಬ್ಯಾರಿಕೇಡ್​ನ್ನು ಹತ್ತಿ ಮುನ್ನುಗ್ಗಲು ಯತ್ನಿಸಿದರು. ಪ್ರತಿಭಟನಾ ನಿರತ ಕೆಲ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಬಸ್​ನಲ್ಲಿ ಕರೆದೊಯ್ಯಲಾಯಿತು.
ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ನಾಗರಿಕರು ಮಂಡಿ ಹೌಸ್​ ಮುಂದೆ ಮಧ್ಯಾಹ್ನ ಪ್ರತಿಭಟನೆ ಆರಂಭಿಸಿದ್ದರು. ನಂತರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಕ್ಕೆ ನಡೆದು, ಮನವಿ ಸಲ್ಲಿಸಲು ಪ್ರತಿಭಟನಾಕಾರರು ಯೋಚಿಸಿದ್ದರು.
ಈ ವೇಳೆ ಭಾನುವಾರ ನಡೆದ ಜೆಎನ್​ಯು ವಿವಿಯಲ್ಲಿ ನಡೆದ ಹಿಂಸಾಚಾರದ ಬಗ್ಗೆ ಹಾಗೂ ಉಪ ಕುಲಪತಿ ರಾಜೀನಾಮೆಗೆ ಒತ್ತಾಯಿಸಲು ತೀರ್ಮಾನಿಸಿದ್ದರು.
ಆದರೆ ನಂತರ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷೆ ಐಷೆ ಘೋಷ್​ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ರಾಮನಾಥ ಕೋವಿಂದ ಅವರನ್ನೂ ಭೇಟಿ ಮಾಡಲು ತೀರ್ಮಾನಿಸಿದರು. ಪ್ರತಿಭಟನೆಯಲ್ಲಿ ಎಡಪಂಥೀಯ ಮುಖ್ಯಸ್ಥ ಸೀತಾರಾಂ ಯೆಚೂರಿ ಹಾಜರಿದ್ದರು.(ಏಜೆನ್ಸೀಸ್​)
#WATCHDelhi Police remove women protesters while they were marching towards Rashtrapati Bhavan. Students are demanding removal of the Jawaharlal Nehru University's Vice Chancellor following Jan 5 violence in the campus.pic.twitter.com/HzT2AjkZF5
— ANI (@ANI)January 9, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
