ನಾಗ್ಪುರ:ರಾಷ್ಟ್ರಾದ್ಯಂತ ತೀವ್ರ ಖಂಡನೆಗೆ ಗುರಿಯಾಗಿರುವ ಟ್ರೈನಿ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಾಕಷ್ಟು ಆಕ್ರೋಶಕ್ಕೆ ಗುರಿಯಾಗಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ರಾಜೀನಾಮೆಗೆ ಆಗ್ರಹ ಕೇಳಿ ಬರುತ್ತಿದೆ. ಟ್ರೈನಿ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಕಿಚ್ಚು ಆರುವ ಮುನ್ನವೇ ವ್ಯಕ್ತಿಯೋರ್ವ ಇಬ್ಬರು ಶಾಲಾ ಬಾಲಕಿಯರಿಗೆ ಅತ್ಯಾಚಾರದ ಬೆದರಿಕೆ ಹಾಕಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.
ಶಾಲೆಗೆ ಆಟೋನಲ್ಲಿ ತೆರಳುತ್ತಿದ್ದ ಇಬ್ಬರು ಬಾಲಕಿಯರು ಮಾತನಾಡುತ್ತಿದ್ದರು, ಇದಕ್ಕೆ ಆಕ್ಷೇಪಿಸಿದ ಆಟೋ ಚಾಲಕ ಮೆಲ್ಲಗೆ ಮಾತನಾಡುವಂತೆ ಸೂಚಿಸಿದ್ದಾನೆ. ಆತನ ಮಾತಿಗೆ ಸೊಪ್ಪು ಹಾಕದ ವಿದ್ಯಾರ್ಥಿನಿಯರು ಎಂದಿನಂತೆ ಮತುಕತೆ ಮುಂದುವರೆಸಿದ್ದಾರೆ. ಈ ವೇಳೆ ಸಿಟ್ಟಿಗೆದ್ದ ಚಾಲಕ ಸುಮ್ಮನಿರುವಂತೆ ಹೇಳಿದ್ದಾನೆ. ಹಾಗೆ ಮಾತನಾಡುವ ವೇಳೆ ಕಲ್ಕತ್ತಾದಲ್ಲಿ ಏನಾಯಿತೋ ಅದೇ ರೀತಿ ನಿನಗೂ ಮಾಡುವೆ ಎಂದು ವಿದ್ಯಾರ್ಥಿನಿಯರಿಗೆ ಅವಾಜ್​ ಹಾಕಿದ್ದಾನೆ.
जैसे कोलकाता में हुआ है, वैसी ही क्रुरता तेरे साथ करूँगा!_आटो चालक ने एक लड़की से कहा जैसे कोलकाता में हुआ है, वैसी ही क्रुरता तेरे साथ करूँगा!पकड़ा गया जनता ने मार-मार कर भरता बना दियाpic.twitter.com/4dgTmb0ieO
ಇದನ್ನೂ ಓದಿ:ಲಾರಿ, ಕಾರಿನ ನಡುವೆ ಭೀಕರ ಅಪಘಾತ; 3 ಮಂದಿ ಸಾವು, ಮೂವರ ಸ್ಥಿತಿ ಗಂಭೀರ
ಕೂಡಲೇ ಆಟೋದಿಂದ ಇಳಿದ ವಿದ್ಯಾರ್ಥಿನಿಯರು ಆಟೋ ಚಾಲಕನಿಗೆ ಸರಿಯಾಗಿ ಮಾತನಾಡುವಂತೆ ಹೇಳಿದ್ದು, ಈ ಸಂಬಂಧ ವಾಗ್ವಾದ ನಡೆದಿದೆ. ಈ ವೇಳೆ ಜಮಾಯಿಸಿದ ಸ್ಥಳೀಯರು ಚಾಲಕನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ ವಿದ್ಯಾರ್ಥಿನಿಯರಿಗೆ ಅತ್ಯಾಚಾರ ಬೆದರಿಕೆ ಹಾಕಿದ ಆಟೋ ಚಾಲಕನನ್ನು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸುತ್ತಿದ್ದು, ಭಯಗೊಂಡು ಅಳುತ್ತಾ ನಿಂತಿದ್ದ ಆ ವಿದ್ಯಾರ್ಥಿನಿಗೆ ಸ್ಥಳೀಯರು ಸಮಾಧಾನ ಮಾಡುತ್ತಿರುವುದನ್ನು ನೋಡಬಹುದಾಗಿದೆ. ಡಾ. ಎಮಿಲಿಯಾಎಂಬುವವರು ಈ ವಿಡಿಯೋವನ್ನು ಹಂಚಿಕೊಂಡಿದ್ದು, 2.5 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆಗೆ ಒಳಪಟ್ಟಿದೆ. ಘಟನೆ ಸಂಬಂಧ ಆಟೋ ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 5 =
Remember me
