ಮುಂಬೈ:ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತರಾಗಿರುವ ಪತ್ರಕರ್ತ ಅರ್ನಬ್ ಗೋಸ್ವಾಮಿಗೆ ಶುಕ್ರವಾರವೂ ಜಾಮೀನು ಸಿಕ್ಕಿಲ್ಲ. ಈ ಕುರಿತ ಅರ್ಜಿಯ ವಿಚಾರಣೆಯನ್ನು ಶನಿವಾರ ನಡೆಸುವುದಾಗಿ ಕೋರ್ಟ್ ಹೇಳಿದೆ. ಹೀಗಾಗಿ ಅವರು ಇನ್ನೊಂದು ದಿನ ಜೈಲಿನಲ್ಲಿ ಕಳೆಯುವಂತಾಗಿದೆ.
ತಮ್ಮನ್ನು ಅಕ್ರಮವಾಗಿ ಬಂಧಿಸಿರುವುದು ಹಾಗೂ ಮಧ್ಯಂತರ ಜಾಮೀನು ಮಂಜೂರು ಮಾಡುವಂತೆ ಕೋರಿ ಅರ್ನಬ್ ಬಾಂಬೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಬುಧವಾರ ಅವರನ್ನು ಬಂಧಿಸಿದ್ದ ಪೊಲೀಸರು, ಆಲಿಬಾಗ್​ನ ಕೋರ್ಟ್​ಗೆ ಹಾಜರುಪಡಿಸಿದ್ದರು. ಕೋರ್ಟ್ ಅವರನ್ನು 14 ದಿನಗಳ ನ್ಯಾಯಾಂಗ ವಶಕ್ಕೆ ಒಪ್ಪಿಸಿತ್ತು. ಇದನ್ನು ಪ್ರಶ್ನಿಸಿ ಅವರು ಬಾಂಬೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಎರಡು ವರ್ಷದ ಹಿಂದೆ ವಿನ್ಯಾಸಕಾರ ಅನ್ವಯ್ ನಾಯಕ್ ಮತ್ತು ಅವರ ತಾಯಿಯ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದಲ್ಲಿ ಅರ್ನಬ್ ಗೋಸ್ವಾಮಿಯನ್ನು ಪೊಲೀಸರು ಬಂಧಿಸಿದ್ದರು.
ಗೋಸ್ವಾಮಿಗೆ ಎಚ್ಚರಿಕೆ: ಕೋರ್ಟ್​ನಲ್ಲಿ ಘನತೆಯಿಂದ ವರ್ತಿಸುವಂತೆ ನ್ಯಾ. ಪಿಂಗಳೆ ಅವರು ಅರ್ನಬ್​ಗೆ ಎಚ್ಚರಿಕೆ ನೀಡಿದರು. ಆರೋಪಿಯಂತೆ ವರ್ತಿಸಿ, ಕಲಾಪಗಳಿಗೆ ಯಾವುದೇ ರೀತಿಯಲ್ಲಿ ಅಡ್ಡಿಪಡಿಸಬೇಡಿ ಎಂದು ಅವರು ಎಚ್ಚರಿಕೆ ನೀಡಿದರು. ತನಗಾಗಿರುವ ಗಾಯವನ್ನು ತೋರಿಸಲು ಅರ್ನಾಬ್ ವೇದಿಕೆ ಮೇಲೆ ಹತ್ತಲು ಪ್ರಯತ್ನಿಸಿದಾಗ ಪಿಂಗಳೆ ಅದಕ್ಕೆ ಅವಕಾಶ ಕೊಡದೆ ಕೋರ್ಟ್​ನಲ್ಲಿ ಸರಿಯಾಗಿ ನಡೆದುಕೊಳ್ಳುವಂತೆ ತಾಕೀತು ಮಾಡಿದರು.
ಬಂಧನಕ್ಕೆ ತಡೆ: ಮಹಾರಾಷ್ಟ್ರ ಸರ್ಕಾರದ ಹಕ್ಕುಚ್ಯುತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ನಬ್ ಗೋಸ್ವಾಮಿ ಬಂಧನಕ್ಕೆ ಸುಪ್ರೀಂಕೋರ್ಟ್ ಶುಕ್ರವಾರ ಪಡೆ ನೀಡಿದೆ. ಜತೆಗೆ ವಿಧಾನಸಭೆ ಕಾರ್ಯದರ್ಶಿ ವಿರುದ್ಧ ಅಸಮಾಧಾನ ಹೊರಹಾಕಿದೆ. ವಿಧಾನ ಮಂಡಳದ ವಿಚಾರ ಗೌಪ್ಯವಾಗಿದ್ದು, ಅದನ್ನು ಕೋರ್ಟ್​ನಲ್ಲಿ ಪ್ರಸ್ತುತ ಪಡಿಸಬಾರದು ಎಂದು ವಿಧಾನಸಭೆ ಕಾರ್ಯದರ್ಶಿ ಅರ್ನಬ್​ಗೆ ಪತ್ರ ಬರೆದು ಎಚ್ಚರಿಸಿದ್ದರು. ಇದು ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿರುವ ಕೋರ್ಟ್, ವಿಧಾನಸಭೆ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
