ಭುವನೇಶ್ವರ್:ಪತಿಯ ಕಿರುಕುಳದಿಂದ ಬೇಸತ್ತು ಮಹಿಳಾ ಪತ್ರಕರ್ತರೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿ ನಡೆದಿದೆ.
ಮೃತರನ್ನು ಮಧುಮಿತಾ ಪರಿದಾ (28) ಎಂದು ಗುರುತಿಸಲಾಗಿದ್ದು, ಇವರು ಸ್ಥಳೀಯ ಸುದ್ದಿ ಮಾಧ್ಯಮ ಒಂದರಲ್ಲಿ ಕಾಪಿ ಎಡಿಟರ್​ ಆಗಿ ಕೆಲಸ ಮಾಡುತ್ತಿದ್ದರು. ಸಾಯುವ ಕೆಲ ಗಂಟೆಗಳಿಗೂ ಮುನ್ನ ತಮ್ಮ ಪತಿಯಿಂದ ಅನುಭವಿಸುತ್ತಿರುವ ಕಿರುಕುಳದ ಬಗ್ಗೆ ಮಧುಮಿತಾ ವಿಡಿಯೋವನ್ನು ಮಾಡಿದ್ದು, ವೈರಲ್​ ಆಗಿದೆ.
ವೈರಲ್​ ಆಗಿರುವ ವಿಡಿಯೋ ನೋಡುವುದಾದರೆ ಮಧುಮಿತಾ ತನ್ನ ಪತಿಯಿಂದ ಆಗಿರುವ ಕಿರುಕುಳದ ಬಗ್ಗೆ ವಿವರಿಸಿದ್ದು, ತನ್ನಿಂದ ಆಗುತ್ತಿಲ್ಲ ಎಂಬುದಾಗಿ ಹೇಳಿಕೊಂಡಿದ್ದಾರೆ. ಇದಾದ ಕೆಲವೇ ಕ್ಷಣಗಳಲ್ಲಿ ಲಿಂಗಪುರ ಪ್ರದೇಶದಲ್ಲಿದ್ದ ದೇವಸ್ಥಾನದ ಬಳಿಯ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಧುಮಿತಾ ಆತ್ಮಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಆಕೆಯ ಪತಿಯನ್ನು ಮೃತಳ ಸಂಬಂಧಿಕರು ಥಳಿಸಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
View this post on InstagramA post shared by journalist (@_madhumita_parida_chinu)

A post shared by journalist (@_madhumita_parida_chinu)
ಇದನ್ನೂ ಓದಿ:ಮನೆಯೂಟಕ್ಕಾಗಿ ದರ್ಶನ್​ ಸಲ್ಲಿಸಿದ್ದ ಅರ್ಜಿ ವಜಾ; ದಾಸನಿಗಾಗಿ ಚಕ್ಕುಲಿ ತಂದಿದ್ದ ಅಭಿಮಾನಿಗೆ ನಿರಾಸೆ
ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಪಿ ಪ್ರತೀಕ್​ ಸಿಂಗ್​, ಮಧುಮಿತಾ ಹಾಗೂ ಭಾರತೀಯ ಏರ್​ಫೋರ್ಸ್​ನಲ್ಲಿ ಕೆಲಸ ಮಾಡುತ್ತಿರುವ ಶ್ರೀಧರ್​ ಐದು ವರ್ಷಗಳ ಕಾಲ ಪ್ರೀತಿಸಿ ಮೂರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಮದುವೆಯಾದ ಬಳಿಕ ದಂಪತಿಗಳ ನಡುವೆ ಒಂದಿಲ್ಲೊಂದು ಕಾರಣಕ್ಕೆ ಜಗಳವಾಗುತ್ತಿತ್ತು. ಸೋಮವಾರ (ಜುಲೈ 22) ಕೂಡ ದಂಪತಿಗಳ ನಡುವೆ ಗಲಾಟೆಯಾಗಿದ್ದು, ಮಧುಮಿತಾ ಫೆನಾಯಿಲ್​ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕುಟುಂಬಸ್ಥರು ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದು, ಆಕೆ ಪ್ರಾಣಪಾಯದಿಂದ ಪಾರಾಗಿದ್ದಳು.
ಈ ಬಗ್ಗೆ ಮಧುಮಿತಾ ಪೋಷಕರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮಧುಮಿತಾ ಪತಿ ಶ್ರೀಧರ್​ನನ್ನು ಕರೆಸಿ ವಿಚಾರಣೆ ನಡೆಸಿದಾಗ ಆತ ಇನ್ಮುಂದೆ ಈ ರೀತಿ ಮಾಡುವುದಿಲ್ಲ ಎಂದು ತಪ್ಪೊಪ್ಪಿಗೆ ಬರೆದುಕೊಟ್ಟು ಠಾಣೆಯಿಂದ ಹೆಂಡತಿಯನ್ನು ಕರೆದುಕೊಂಡು ಹೋಗಿದ್ದ. ಇದಾದ ಕೆಲ ದಿನಗಳ ಬಳಿಕ ಪತಿ-ಪತ್ನಿ ನಡುವೆ ಗಲಾಟೆಯಾಗಿದ್ದು, ಮಧುಮಿತಾ ಪೊಲೀಸರಿಗೆ ದೂರು ನೀಡಿದ್ದರು. ದೂರಿನಲ್ಲಿ ತನ್ನ ಪತಿಗೆ ಈಗಾಗಲೇ ಮದುವೆಯಾಗಿ ವಿಚ್ಛೇದನವಾಗಿದ್ದು, ಅನೇಕ ಮಹಿಳೆಯರೊಂದಿಗೆ ಅಕ್ರಮ ಸಂಬಂಧವನ್ನು ಹೊಂದಿದ್ದಾನೆ ಎಂದು ಆರೋಪಿಸಿ ದೂರು ದಾಖಲಿಸಿದ್ದರು.
ದೂರು ದಾಖಲಿಸಿದ ಬಳಿಕ ವಿಚಾರಣೆ ನಡೆಸಿ ಹಿರಿಯರ ಸಮ್ಮುಖದಲ್ಲಿ ರಾಜಿ-ಸಂಧಾನ ಮಾಡಿ ಕಳುಹಿಸಲಾಗಿತ್ತು. ಇದಾದ ಕೆಲ ದಿನಗಳ ಬಳಿಕ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆಯ ಪತಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆತನ ಮೊಬೈಲ್​ಅನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಪ್ರತೀಕ್​ ಸಿಂಗ್​ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
