ಆನೇಕಲ್:ತೆಲುಗು ನಟ ನಂದಮೂರಿ ತಾರಕ ರತ್ನ ಅವರಿಗೆ ಹೃದಯಾಘಾತ ಹಿನ್ನೆಲೆ ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಸ್ಥಳಾಂತರ ಮಾಡಲಾಗಿದೆ.
ಬೆಂಗಳೂರಿನ ಬೊಮ್ಮಸಂದ್ರದ ನಾರಾಯಣ ಹೃದಯಾಲದ ಆಸ್ಪತ್ರೆಗೆ ನಂದಮೂರಿ ತಾರಕ ರತ್ನ ಅವರನ್ನು ಮಧ್ಯರಾತ್ರಿ 2 ಗಂಟೆಯ ಸುಮಾರಿಗೆ ಕರೆತರಲಾಗಿದೆ. ಆಂಬ್ಯುಲೆನ್ಸ್​ ಜೊತೆಗೆ ಸುಮಾರು ನಲವತ್ತು ಕಾರುಗಳಲ್ಲಿ ನಂದಮೂರಿ ತಾರಕ ರತ್ನ ಕುಟುಂಬ ಆಗಮಿಸಿದೆ.
ನಾರಾಯಣ ಹೃದಯಾಲಯದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಕೆಲ ಸಮಯದಲ್ಲಿ ವೈದ್ಯರು ಇಸಿಎಂಒ ಚಿಕಿತ್ಸೆ ಕೊಡಲಿದ್ದಾರೆ.
ಶುಕ್ರವಾರ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂನಲ್ಲಿ ನಡೆದ ರಾಜಕೀಯ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಅವರು ದಿಢೀರ್​ ಕುಸಿದುಬಿದ್ದಿದ್ದರು. ಅವರಿಗೆ ಭಾರೀ ಹೃದಯಾಘಾತದಿಂದ ಬಳಲಿದ್ದಾರೆ ಎಂದು ಅವರ ಅಂಕಲ್​ ನಂದಮೂರಿ ಬಾಲಕೃಷ್ಣ ತಿಳಿಸಿದ್ದಾರೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿ, ಪ್ರಾಥಮಿಕ ಚಿಕಿತ್ಸೆಯನ್ನು ನೀಡಿ, ಇದೀಗ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಸ್ಥಳಾಂತರ ಮಾಡಲಾಗಿದೆ.
ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪುತ್ರ ನಾರಾ ಲೋಕೇಶ್ ಅವರು ಆರಂಭಿಸಿದ ರಾಜಕೀಯ ಸಮಾವೇಶದಲ್ಲಿ ರತ್ನಾ ಭಾಗವಹಿಸಿದ್ದರು. ವರದಿಯ ಪ್ರಕಾರ, ನಂದಮೂರಿ ತಾರಕ ರತ್ನ ಅವರು ಲಕ್ಷ್ಮಿಪುರಂ ಶ್ರೀ ವರದರಾಜ ಸ್ವಾಮಿ ದೇವಸ್ಥಾನದಲ್ಲಿ ಪೂಜೆಯಲ್ಲಿ ಪಾಲ್ಗೊಂಡರು. ನಂತರ ಅವರು ಮಸೀದಿಯಲ್ಲಿ ಪ್ರಾರ್ಥನೆಗೆ ಸಲ್ಲಿಸಿದರು. ಮಸೀದಿಯಿಂದ ಹೊರಬರುವ ವೇಳೆ ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಿದ ವಿಡಿಯೋಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿವೆ.(ಏಜೆನ್ಸೀಸ್​)
ಕೇಂದ್ರ ಸಚಿವ ಅಶ್ವಿನಿ ಕುಮಾರ್​ ಚೌಬೆ ಸಹೋದರ ಆಸ್ಪತ್ರೆಯಲ್ಲಿ ನಿಧನ: ನಿರ್ಲಕ್ಷ್ಯ ಆರೋಪ, ಇಬ್ಬರು ವೈದ್ಯರು ಸಸ್ಪೆಂಡ್​

ಬೆಳಗಾವಿ ಕರ್ನಾಟಕದಲ್ಲಿ ಉಳಿಯಲು ಕೆಎಲ್​ಇ ಕಾರಣ: ಸಂಸ್ಥೆ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅಭಿಪ್ರಾಯ

ಷೇರುಪೇಟೆಯಲ್ಲಿ ಕರಡಿ ಕುಣಿತ, ಅದಾನಿ ಸಮೂಹಕ್ಕೆ ಹೊಡೆತ; ಒಂದೇ ದಿನ 2.5 ಲಕ್ಷ ಕೋಟಿ ರೂ. ನಷ್ಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
