ನವದೆಹಲಿ:ಪ್ರತಿ ವರ್ಷ ಜೂನ್ 25 ರಂದು ಸಂವಿಧಾನ ಹತ್ಯೆ ದಿನ ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ. ಈ ನಿರ್ಧಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಪ್ರಧಾನಿ ಮತ್ತೊಮ್ಮೆ ಬೂಟಾಟಿಕೆಯಿಂದ ಕೂಡಿದ ಶೀರ್ಷಿಕೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇದನ್ನು ಓದಿ:ಜೂನ್​​​ 25ರಂದು ಸಂವಿಧಾನ ಹತ್ಯೆ ದಿನ ಆಚರಿಸಲು ಕೇಂದ್ರ ಸರ್ಕಾರ ನಿರ್ಧಾರ
ಭಾರತದ ಜನರು ಇತಿಹಾಸದಲ್ಲಿ 4ನೇ ಜೂನ್ 2024 ಅನ್ನು ಮೋದಿ ಮುಕ್ತಿ ದಿನ ಎಂದು ಕರೆಯುತ್ತಾರೆ. ಜೂನ್​ 4ರ ಫಲಿತಾಂಶವು ಭಾರತದ ಜನರು ಪ್ರಧಾನಿ ಮೋದಿ ಅವರಿಗೆ ನೀಡಿದ ನಿರ್ಣಾಯಕ ವೈಯಕ್ತಿಕ, ರಾಜಕೀಯ ಮತ್ತು ನೈತಿಕ ಸೋಲು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕೇವಲ 240 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು, ಸರಳ ಬಹುಮತಕ್ಕೆ 32 ಸ್ಥಾನಗಳ ಕೊರತೆಯಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎನ್‌ಡಿಎ ಮಿತ್ರಪಕ್ಷಗಳ ಬೆಂಬಲದೊಂದಿಗೆ ಸತತ ಮೂರನೇ ಸರ್ಕಾರವನ್ನು ರಚಿಸಿದರು ಎಂದು ಹೇಳಿದರು.
ಅದಕ್ಕೂ ಮೊದಲು ಅವರು (ಪಿಎಂ ಮೋದಿ) ಹತ್ತು ವರ್ಷಗಳ ಕಾಲ ಅಘೋಷಿತ ತುರ್ತು ಪರಿಸ್ಥಿತಿಯನ್ನು ಹೇರಿದ್ದರು. ಭಾರತದ ಸಂವಿಧಾನ ಮತ್ತು ಅದರ ತತ್ವಗಳು, ಮೌಲ್ಯಗಳು ಮತ್ತು ಸಂಸ್ಥೆಗಳ ಮೇಲೆ ವ್ಯವಸ್ಥಿತವಾಗಿ ದಾಳಿ ಮಾಡಿದ್ದು ಇದೇ ಪ್ರಧಾನಿ. ಅಲ್ಲದೆ ಪ್ರಧಾನಮಂತ್ರಿಗಳ ಸೈದ್ಧಾಂತಿಕ ಕುಟುಂಬವು ನವೆಂಬರ್ 1949ರಲ್ಲಿ ಭಾರತದ ಸಂವಿಧಾನವನ್ನು ಮನುಸ್ಮೃತಿಯಿಂದ ಪ್ರೇರಿತವಾಗಿಲ್ಲ ಎಂಬ ಕಾರಣಕ್ಕೆ ತಿರಸ್ಕರಿಸಿತು. ಅವರಿಗೆ ಪ್ರಜಾಪ್ರಭುತ್ವ ಎಂದರೆ ಡೆಮೋ- ಕುರ್ಚಿ ಎಂದು ಜೈರಾಮ್​ ರಮೇಶ್​ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಧಾನಿ ಇಂದಿರಾ ಗಾಂಧಿಯವರು ತಮ್ಮ ಸರ್ವಾಧಿಕಾರಿ ಮನಸ್ಥಿತಿಯನ್ನು ಪ್ರದರ್ಶಿಸಿ 1975ರ ಜೂನ್ 25ರಂದು ದೇಶದಲ್ಲಿ ತುರ್ತುಪರಿಸ್ಥಿತಿ ಹೇರುವ ಮೂಲಕ ಭಾರತದ ಪ್ರಜಾಪ್ರಭುತ್ವದ ಆತ್ಮವನ್ನೇ ಕತ್ತು ಹಿಸುಕಿದರು. ವಿನಾಕಾರಣ ಲಕ್ಷಾಂತರ ಜನರನ್ನು ಜೈಲಿಗೆ ತಳ್ಳಿ ಮಾಧ್ಯಮಗಳ ಧ್ವನಿಯನ್ನು ಹತ್ತಿಕ್ಕಲಾಯಿತು. ಆದ್ದರಿಂದ ಭಾರತ ಸರ್ಕಾರವು ಪ್ರತಿ ವರ್ಷ ಜೂನ್ 25 ಅನ್ನು ‘ಸಂವಿಧಾನ ಹತ್ಯೆ ದಿನ’ ಎಂದು ಆಚರಿಸಲು ನಿರ್ಧರಿಸಿದೆ ಎಂದು ಅಮಿತ್​ ಷಾ ಪೋಸ್ಟ್​ ಮಾಡಿದ್ದರು. (ಏಜೆನ್ಸೀಸ್​​)
ಆಂಧ್ರ ಮಾಜಿ ಸಿಎಂ ಜಗನ್​ ಮೋಹನ್​ ರೆಡ್ಡಿ ವಿರುದ್ಧ ಹತ್ಯೆ ಪ್ರಕರಣ ದಾಖಲು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 + 4 =
Remember me
