ಕಲ್ಕತ್ತಾ:ಮುಂದಿನ ಕೆಲವೇ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿದ್ದು, ಅದಕ್ಕೆ ಮುನ್ನುಡಿ ಎಂಬಂತೆ ಚಿತ್ರ ನಟರು, ಮಾಜಿ ಕ್ರೀಡಾ ತಾರೆಯರು ಹಾಗೂ ಸರ್ಕಾರಿ ಅಧಿಕಾರಿಗಳು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ರಾಜಕೀಯ ಪಕ್ಷಗಳನ್ನು ಸೇರುತ್ತಿದ್ದಾರೆ. ಇದೀಗ ಮಹತ್ವದ ಬೆಳವಣಿಗೆ ಒಂದರಲ್ಲಿ ಕಲ್ಕತ್ತಾ ಹೈಕೋರ್ಟ್​ನ ನ್ಯಾಯಮೂರ್ತಿಯಾಗಿದ್ದ ಅಭಿಜಿತ್ ಗಂಗೋಪಾಧ್ಯಾಯ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿ ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ.
ರಾಜೀನಾಮೆ ನೀಡಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದ ಅಭಿಜಿತ್​, ಪಶ್ಚಿಮ ಬಂಗಾಳದಲ್ಲಿರುವ ಭ್ರಷ್ಟ ತೃಣಮೂಲ ಕಾಂಗ್ರೆಸ್​ ಸರ್ಕಾರದ ವಿರುದ್ಧ ಹೋರಾಡುವ ಸಲುವಾಗಿ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.
ಭ್ರಷ್ಟಾಚಾರಕ್ಕೆ ಸಮಾನಾರ್ಥಕ ಪದ ಯಾವುದಾದರೂ ಇದ್ದರೆ ಅದು ತೃಣಮೂಲ ಕಾಂಗ್ರೆಸ್​ ಎಂದು ಹೇಳಬಹುದಾಗಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿರುವ ಏಕೈಕ ರಾಷ್ಟ್ರೀಯ ಪಕ್ಷ ಎಂದರೆ ಅದು ಬಿಜೆಪಿ ಹಾಗಾಗಿ ನಾನು ಮಾರ್ಚ್​ 07ರಂದು ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ.
VIDEO | "I don't consider TMC as a (political) party rather it is a theatre group," says Justice Abhijit Gangopadhyay, who resigned as a judge of Calcutta High Court earlier today, during a press conference in#Kolkata.(Full video available on PTI Videos -…pic.twitter.com/F3MoHWczJ3
ಇದನ್ನೂ ಓದಿ:ಪಾಕ್​ ನೂತನ ಪ್ರಧಾನಿಯ ಐದನೇ ಮದುವೆ ರಹಸ್ಯ ಬಯಲು; ಆದರೆ ಕಿರಿಯ ಬೇಗಂ ಹೇಳಿದ್ದೆ ಬೇರೆ
ಕಳೆದ ಕೆಲ ದಿನಗಳಿಂದ ಟಿಎಂಸಿ ನಾಯಕರು ನನ್ನ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಾನು ನೀಡಿದ ತೀರ್ಪು ಇಷ್ಟವಾಗಿಲ್ಲವೆಂದರೆ ನ್ಯಾಯಾಧೀಶರ ಬಗ್ಗೆ ಸಾರ್ವಜನಿಕವಾಗಿ ಹೇಳಿಕೆಗಳನ್ನು ಕೊಡುವುದು ನನಗೆ ಇಷ್ಟವಾಗುತ್ತಿಲ್ಲ. ಈ ರೀತಿಯ ಪ್ರಚೋದನಕಾರಿ ಹೇಳಿಕೆಗಳು ನನ್ನನ್ನು ರಾಜಕೀಯ ಸೇರುವುದಕ್ಕೆ ಪ್ರೇರೆಪಿಸಿತ್ತು.
ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯ ಅವನತಿ ಶುರುವಾಗಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಇದು ತಿಳಿಯಲಿದೆ. 2009ರಲ್ಲಿ ಸಿಪಿಐ (ಎಂ) ನೇತೃತ್ವದ ಎಡರಂಗವು ಹೀನಾಯವಾಗಿ ಸೋತ ನಂತರ ಅದು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿಲ್ಲ. 2024ರ ಲೋಕಸಭೆ ಚುನಾವಣೆಯಲ್ಲಿ ಇದು ಪುನರಾವರ್ತನೆಯಾಗಲಿದ್ದು, ಈ ಬಾರಿ ಟಿಎಂಸಿ ಅಧಿಕಾರದಿಂದ ಕೆಳಗಿಳಿಯುವುದು ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಕುರಿತು ಬಿಜೆಪಿ ಹೈಕಮಾಂಡ್​ ನಿರ್ಧಾರ ಮಾಡುತ್ತದೆ. ನನ್ನ ಸ್ಪರ್ದೆ ಬಗ್ಗೆ ನಾನಿನ್ನು ನಿರ್ಧಾರ ಮಾಡಿಲ್ಲ. ನನ್ನ ಗುರ ಇರುವುದು ಒಂದೇ ರಾಜ್ಯದಲ್ಲಿರುವ ಭ್ರಷ್ಟ ಟಿಎಂಸಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವುದು ಎಂದು ಅಭಿಜಿತ್ ಗಂಗೋಪಾಧ್ಯಾಯ ಹೇಳಿದ್ದಾರೆ.
#WATCH| Kolkata, West Bengal | Former Calcutta High Court judge Justice Abhijit Gangopadhyay says, "Maybe on 7th (March) in the afternoon. There is a tentative program, when I will join BJP."pic.twitter.com/IoMosl7PVJ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
