ನವದೆಹಲಿ: ದೇಶಾದ್ಯಂತ ಸಂಚಲನ ಮೂಡಿಸಿದ 2012ರ ಡಿಸೆಂಬರ್​ನಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಅಪರಾಧಿಗಳನ್ನು ಶುಕ್ರವಾರ ಮುಂಜಾನೆ 5.30ಕ್ಕೆ ಕೊನೆಗೂ ಗಲ್ಲಿಗೇರಿಸಲಾಗಿದೆ. ಕೊನೇಹಂತದ ತನಕವೂ ನ್ಯಾಯಾಂಗ ಹೋರಾಟ ನಡೆದಿದ್ದು, ಗಲ್ಲಿನ ಕುಣಿಕೆಯಿಂದ ತಪ್ಪಿಸಿಕೊಳ್ಳುವಲ್ಲಿ ಅಪರಾಧಿಗಳು ವಿಫಲರಾದರು. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರೂ ಶುಕ್ರವಾರ ತಮ್ಮ ಅಭಿಪ್ರಾಯವನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.
ಟ್ವೀಟ್ ಸಂದೇಶದ ಸಾರ ಇಲ್ಲಿದೆ – ಈ ಪ್ರಕರಣದಲ್ಲಿ ನ್ಯಾಯ ಮೇಲುಗೈ ಸಾಧಿಸಿದೆ. ಮಹಿಳೆಯರ ಘನತೆ ಮತ್ತು ಸುರಕ್ಷತೆಯನ್ನು ಖಾತರಿ ಪಡಿಸುವ ಕೆಲಸ ಅತ್ಯಂತ ಮಹತ್ವದ್ದು. ನಮ್ಮ ನಾರಿ ಶಕ್ತಿ ಪ್ರತಿಯೊಂದು ಕ್ಷೇತ್ರದಲ್ಲೂ ಉತ್ತಮ ಸಾಧನೆ ಮಾಡಿದೆ. ಒಟ್ಟಾಗಿ, ಮಹಿಳಾ ಸಬಲೀಕರಣ ಕೇಂದ್ರೀಕೃತವಾದ ರಾಷ್ಟ್ರವನ್ನು ನಾವು ನಿರ್ಮಿಸಬೇಕು. ಅಲ್ಲಿ ಸಮಾನತೆ ಮತ್ತು ಅವಕಾಶಗಳಿಗೆ ಒತ್ತು ಸಿಗಲಿದೆ ಎಂದು ಪ್ರಧಾನಿ ಮೋದಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇಡೀ ದೇಶದಲ್ಲಿ ಸಂಚಲನ ಮೂಡಿಸಿದ್ದು, ಕಾನೂನು ಬದಲಾವಣೆಗೂ ಕಾರಣವಾದ ಪ್ರಕರಣವಾಗಿತ್ತು. ಏಳು ವರ್ಷಗಳ ಬಳಿಕ ಸಂತ್ರಸ್ತೆಗೆ ನ್ಯಾಯ ಸಿಕ್ಕಿದೆ. ಹೀಗಾಗಿ ಇದು ಇಂತಹ ಕೃತ್ಯ ಎಸಗುವವರಿಗೆ ಎಚ್ಚರಿಕೆಯ ಪಾಠ ಎಂಬ ಮಾತೂ ಕೇಳಿದ್ದು, ಮಹತ್ವದ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಕ್ಕಂತಾಗಿದೆ. (ಏಜೆನ್ಸೀಸ್)
ನಿರ್ಭಯಾ ಕೇಸ್​ನ ಅಪರಾಧಿಗಳನ್ನು ನೇಣಿಗೇರಿಸಲು ಕೈದಿಗಳೇ ತಯಾರಿಸಿದ್ರಾ ಹಗ್ಗ?, ಪೂರ್ವಸಿದ್ಧತೆ ಹೇಗಿತ್ತು- ಇಲ್ಲಿದೆ ಮಾಹಿತಿ..

Justice has prevailed.
It is of utmost importance to ensure dignity and safety of women.
Our Nari Shakti has excelled in every field. Together, we have to build a nation where the focus is on women empowerment, where there is emphasis on equality and opportunity.
— Narendra Modi (@narendramodi)March 20, 2020

ತಿಹಾರ್​ ಜೈಲಿನಲ್ಲಿ ನೇಣುಗಂಬಕ್ಕೆ ಏರಿದ ನಿರ್ಭಯಾ ಅತ್ಯಾಚಾರ ಅಪರಾಧಿಗಳು; ಮಾಡಿದ ಪಾಪಕ್ಕೆ ಕುಣಿಕೆಯಲ್ಲಿ ಹೋಯ್ತು ಜೀವ

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:three − 1 =
Remember me
