ನವದೆಹಲಿ:ಮಾರ್ಚ್​ನಲ್ಲಿ ಕಾಂಗ್ರೆಸ್​ ತೊರೆದು, ಬಿಜೆಪಿಗೆ ಸೇರ್ಪಡೆಯಾಗಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಕರೊನಾ ಸೋಂಕಿಗೆ ಒಳಗಾಗಿದ್ದಾರೆ.
ಸಿಂಧಿಯಾ ಹಾಗೂ ಅವರ ತಾಯಿ ಮಾಧವಿ ರಾಜೆ ಸಿಂಧಿಯಾ ಇಬ್ಬರಲ್ಲೂ ಕೊವಿಡ್​-19 ಕಾಣಿಸಿಕೊಂಡಿದ್ದು, ಅವರು ದಕ್ಷಿಣ ದೆಹಲಿಯಲ್ಲಿರುವ ಮ್ಯಾಕ್ಸ್​ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.ಇದನ್ನೂ ಓದಿ:ಪತ್ನಿಯ ಯೋಗಾಭ್ಯಾಸ ವಿಡಿಯೋದಲ್ಲಿ ‘ಬೆತ್ತಲಾದ’ ನ್ಯೂಸ್​ ಆ್ಯಂಕರ್​…!
ಸಿಂಧಿಯಾ ಅವರಲ್ಲಿ ಕಳೆದ ನಾಲ್ಕು ದಿನಗಳಿಂದಲೂ ಕರೊನಾ ಲಕ್ಷಣ ಇತ್ತು. ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ತಾಯಿಯನ್ನು ಟೆಸ್ಟ್​ಗೆ ಒಳಪಡಿಸಿದಾಗ ಅವರಲ್ಲಿಯೂ ಪಾಸಿಟಿವ್​ ಎಂದು ವರದಿ ಬಂದಿದೆ. ಆದರೆ ಅವರಿಗೆ ಯಾವುದೇ ಲಕ್ಷಣಗಳೂ ಇಲ್ಲ.ಇದನ್ನೂ ಓದಿ:29ಕ್ಕೆ ವಿಧಾನ ಪರಿಷತ್​ನ 7 ಸ್ಥಾನಗಳಿಗೆ ಚುನಾವಣೆ: ವೇಳಾಪಟ್ಟಿ ಪ್ರಕಟ
ಕಳೆದ ಎರಡು ದಿನಗಳ ಹಿಂದೆ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರಲ್ಲಿ ಕರೊನಾ ಲಕ್ಷಣಗಳು ಕಾಣಿಸಿಕೊಂಡಿತ್ತು. ಅವರನ್ನು ಗುರ್​ಗಾಂವ್​ನ ಆಸ್ಪತ್ರೆಯೊಂದರಲ್ಲಿ ಅಡ್ಮಿಟ್ ಮಾಡಲಾಗಿತ್ತು. ಸೋಮವಾರ ಡಿಸ್​ಚಾರ್ಜ್​ ಆಗಿದ್ದಾರೆ.ಹಾಗೇ, ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಅವರಲ್ಲೂ ಜ್ವರ, ಗಂಟಲು ನೋವಿನಂತರ ಕರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದು, ಇಂದು ಬೆಳಗ್ಗೆ ಕೊವಿಡ್​-19 ಟೆಸ್ಟ್​ಗೆ ಒಳಪಟ್ಟಿದ್ದಾರೆ. (ಏಜೆನ್ಸೀಸ್​)
VIDEO: ಜನಾಂಗೀಯ ದ್ವೇಷದ ವಿರುದ್ಧ ಚುಂಬಿಸುತ್ತಾ ಪ್ರತಿಭಟನೆ ಮಾಡಿದ ನವದಂಪತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 11 =
Remember me
