ಭೋಪಾಲ್​:ಕಾಂಗ್ರೆಸ್​ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿರುವ ಮಾಜಿ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಇಂದು ಮಧ್ಯಪ್ರದೇಶದ ರಾಜ್ಯ ಸಭಾ ಚುನಾವಣೆಗೆ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದಾರೆ.
ಇಂದು ಮಧ್ಯಾಹ್ನ 2 ಗಂಟೆಯ ಹೊತ್ತಿಗೆ ರಾಜ್ಯ ಬಿಜೆಪಿ ಕಚೇರಿಯಿಂದ ರಾಜ್ಯ ವಿಧಾನಸಭಾ ಕಾರ್ಯದರ್ಶಿಯ ಕಚೇರಿಯನ್ನು ತಲುಪಿದ ಸಿಂಧಿಯಾ ಅಲ್ಲಿ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ಆ ವೇಳೆ ಮಾಜಿ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​, ರಾಜ್ಯ ಬಿಜೆಪಿ ಅಧ್ಯಕ್ಷ ವಿ.ಡಿ.ಶರ್ಮಾ, ರಾಜ್ಯಸಭಾ ಸದಸ್ಯ ಪ್ರಭಾತ್​ ಸೇರಿ ಪಕ್ಷದ ಅನೇಕ ಮುಖಂಡರು ಸಿಂಧಿಯಾ ಜತೆಯಿದ್ದು ಶುಭಹಾರೈಸಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಮೊದಲು ಸಿಂಧಿಯಾ ಸೇರಿದಂತೆ ಬಿಜೆಪಿಯ ಅನೇಕ ಮುಖಂಡರು ಮಾಜಿ ಸಚಿವರಾದ ನರೋತ್ತಮ್​ ಮಿಶ್ರಾ ಅವರ ಮನೆಯಲ್ಲಿ ಔತಣ ಕೂಟದಲ್ಲಿ ಭಾಗವಹಿಸಿದ್ದರು.
ಮಾ.10ರಂದು ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್​ಗೆ ರಾಜೀನಾಮೆ ಪತ್ರವನ್ನು ನೀಡಿದ್ದರು. ಮಾ.11ರಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್​ ಚೌಹಾಣ್​ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಪಕ್ಷಕ್ಕೆ ಸೇರಿದ ಕೆಲವೇ ಗಂಟೆಗಳಲ್ಲಿ ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿತ್ತು.(ಏಜೆನ್ಸೀಸ್​)
ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರಿದ ಕೂಡಲೇ ಟ್ವೀಟ್ ಮಾಡಿದ ರಾಜಸ್ಥಾನ ಡಿಸಿಎಂ ಸಚಿನ್​ ಪೈಲಟ್​…

ವದಂತಿಗಳಿಂದ ಬೇಸರಗೊಂಡ ಅನುಷ್ಕಾ ಶೆಟ್ಟಿ ತನ್ನ ಮದುವೆ ಕುರಿತು ಹೇಳಿದ್ದು ಹೀಗೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 20 =
Remember me
