ನವದೆಹಲಿ:ಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ತಮ್ಮ ತವರು ರಾಜ್ಯವಾದ ಮಧ್ಯಪ್ರದೇಶದ ಜನರಿಗೆ ಇಂದು ಶುಭ ಸುದ್ದಿಯೊಂದನ್ನು ನೀಡಿದ್ದಾರೆ. ಉಡಾನ್ ಯೋಜನೆಯಲ್ಲಿ ರಾಜ್ಯಕ್ಕೆ ಇನ್ನಷ್ಟು ವಿಮಾನಗಳ ಸಂಚಾರ ಆರಂಭಿಸುವುದಾಗಿ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಉಡಾನ್​ ಯೋಜನೆಯಲ್ಲಿ ಮಧ್ಯಪ್ರದೇಶದಲ್ಲಿ ಜುಲೈ 16ರಿಂದ ಹೊಸದಾಗಿ 8 ವಿಮಾನಗಳು ಸಂಚಾರ ಆರಂಭಿಸಲಿವೆ. ಗ್ವಾಲಿಯರ್-ಮುಂಬೈ-ಗ್ವಾಲಿಯರ್, ಗ್ವಾಲಿಯರ್-ಪುಣೆ-ಗ್ವಾಲಿಯರ್, ಜಬಲ್ಪುರ-ಸೂರತ್-ಜಬಲ್ಪುರ, ಅಹಮದಾಬಾದ್-ಗ್ವಾಲಿಯರ್ ಅಹಮದಾಬಾದ್​ ಮಾರ್ಗದಲ್ಲಿ ವಿಮಾನಗಳು ಸಂಚರಿಸಲಿವೆ. ಹೊಸ ವಿಮಾನಗಳನ್ನು ಸ್ಪೈಸ್ ಜೆಟ್ ನಿರ್ವಹಿಸಲಿದೆ ಎಂದು ಅವರು ತಿಳಿಸಿದ್ದಾರೆ.
Good news for Madhya Pradesh! Starting 8 new flights from July 16 onwards via@flyspicejet– Gwalior-Mumbai-Gwalior– Gwalior-Pune-Gwalior– Jabalpur-Surat-Jabalpur– Ahmedabad-Gwalior-Ahmedabad@MoCA_GoI& the aviation industry are committed to take#UDANto greater heights!
— Jyotiraditya M. Scindia (@JM_Scindia)July 11, 2021

ನಾಗರಿಕ ವಿಮಾನಯಾನ ಸಚಿವಾಲಯವು ಮತ್ತು ವಾಯುಯಾನ ಉದ್ಯಮವು ಉಡಾನ್ ಯೋಜನೆಯನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಲು ಬದ್ಧವಾಗಿದೆ ಎಂದು ಸಚಿವರು ಹೇಳಿದ್ದಾರೆ. ಈ ವಿಚಾರವನ್ನು ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ತೊರೆದ ನಂತರ ಕಳೆದ ವರ್ಷ ಬಿಜೆಪಿಗೆ ಸೇರಿದ ಜ್ಯೋತಿರಾದಿತ್ಯ ಸಿಂಧ್ಯಾ ಅವರು 33ನೇ ನಾಗರಿಕ ವಿಮಾನಯಾನ ಸಚಿವರಾಗಿ ಶುಕ್ರವಾರ ಅಧಿಕಾರ ವಹಿಸಿಕೊಂಡರು. (ಏಜೆನ್ಸೀಸ್)
ಉತ್ತರಾಖಂಡದಲ್ಲೂ ಉಚಿತ ವಿದ್ಯುತ್ ಭರವಸೆ ನೀಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

‘ವೆಲ್‌ಡನ್‌ ಹರ್ಲೀನ್​ ಡಿಯೋಲ್’​- ಪ್ರಧಾನಿಯ ಮನಗೆದ್ದ ಭಾರತೀಯ ಕುವರಿ ಹರ್ಲೀನ್​ ಡಿಯೋಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
