ನವದೆಹಲಿ:ಭಾರತೀಯ ರೈಲ್ವೇ ವ್ಯವಸ್ಥೆ ವಿಶ್ವದಲ್ಲೆ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ದೇಶದಲ್ಲಿ ಪ್ರಸ್ತುತ 23 ವಂದೇ ಭಾರತ್​ ರೈಲುಗಳು ಸಂಚರಿಸುತ್ತಿದ್ದು, 2047ರ ವೇಳೆಗೆ 4,500 ವಂದೇ ಭಾರತ್​ ರೈಲುಗಳನ್ನು ಓಡಿಸುವುದು ನಮ್ಮ ಉದ್ದೇಶ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.
ಮುಂದಿನ ಮೂರು ವರ್ಷಗಳಲ್ಲಿ ಭಾರತವು ತನ್ನ ಮೊದಲ ಹೈಸ್ಪೀಡ್​ ಬುಲೆಟ್​ ರೈಲು ಹೊಂದಲಿದೆ. ವಂದೇ ಭಾರತ್​ ಎಕ್ಸ್​ಪ್ರೆಸ್​ ಮತ್ತು ಬುಲೆಟ್​ ರೈಲುಗಳ ಹೊರತಾಗಿ, ಮುಂಬರುವ ವರ್ಷಗಳಲ್ಲಿ ರೈಲುಗಳಿಂದ ಇಂಗಾಲದ ಹೊರಸೂಸುವಿಕೆಯನ್ನು ನಿವ್ವಳ ಶೂನ್ಯಕ್ಕೆ ಇಳಿಸುವುದನ್ನು ಖಚಿತಪಡಿಸಿಕೊಳ್ಳಲು ಭಾರತ ಸರ್ಕಾರವು ಕೆಲಸ ಮಾಡಲಿದೆ ಎಂದು ತಿಳಿಸಿದ್ದಾರೆ.
ಮೊದಲು ದೇಶದಲ್ಲಿ ದೂರದೃಷ್ಟಿ ಮತ್ತು ನಾಯಕತ್ವದ ಕೊರತೆ ಇತ್ತು. 2014ರಲ್ಲಿ ಹೊಸ ಹಂತ ಪ್ರಾರಂಭವಾಯಿತು. 10 ಲಕ್ಷ ಕೋಟಿ ರೂಪಾಯಿ ಬಂಡವಾಳ ವೆಚ್ಚದ ಯೋಜನೆ ಜಾರಿಯಲ್ಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯನ್ನು ನಿರ್ಮಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
