ಕಡಪ:ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರ ಪ್ರದೇಶದ ಕಡಪ ಜಿಲ್ಲೆಯಲ್ಲಿ ಗುರುವಾರ (ಫೆ.4) ನಡೆದಿದೆ. ಮೃತರನ್ನು ತಾಯಿ ಶ್ರಾವಣಿ (34) ಮತ್ತು ಮಗಳು ಶಾನ್ವಿ (9) ಎಂದು ಗುರುತಿಸಲಾಗಿದೆ.

ಕಡಪ ನಗರದ ಶಂಕರಪುರಂನ ರಾಮಾಲಯಮ್​ ಸ್ಟ್ರೀಟ್​ ನಿವಾಸಿಯಾದ ಶ್ರಾವಣಿ ಮಗಳ ಜತೆಗೆ ಮನೆಯ ಬೆಡ್​ರೂಮ್​ನ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ವಶಕ್ಕೆ ಪಡೆದು ಶವಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಿದ್ದಾರೆ.
ಇದನ್ನೂ ಓದಿರಿ:ತಾಲೂಕು ಪಂಚಾಯಿತಿಯನ್ನೇ ರದ್ದು ಮಾಡಲು ಸಿದ್ಧತೆ! ಕರ್ನಾಟಕದಲ್ಲಿ ಜಿಪಂ, ಗ್ರಾಪಂ ಮಾತ್ರ ಇರುತ್ತೆ…
ಪೊಲೀಸ್​ ಮೂಲಗಳ ಪ್ರಕಾರ ಶ್ರಾವಣಿ ಸ್ಥಳೀಯ ಖಾಸಗಿ ಆಸ್ಪತ್ರೆಯೊಂದರಲ್ಲಿ ರಿಸೆಪ್ಶನಿಸ್ಟ್​ ಆಗಿ ಕೆಲಸ ಮಾಡುತ್ತಿದ್ದರು. 10 ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದರು. ಕೆಲ ವರ್ಷಗಳ ಬಳಿಕ ಗಂಡ-ಹೆಂಡತಿ ಸಂಬಂಧದಲ್ಲಿ ಒಡಕು ಮೂಡಿ ಆಗಾಗ ಜಗಳವಾಗುತ್ತಿತ್ತು. ಕಳೆದ ನಾಲ್ಕು ವರ್ಷದಿಂದ ಗಂಡನಿಂದ ದೂರಾಗಿ ಮಗಳೊಂದಿಗೆ ವಾಸವಿದ್ದರು. ಸಾಫ್ಟ್​ವೇರ್​ ಇಂಜಿನಿಯರ್​ ಆಗಿರುವ ಪತಿ ಯುಎಸ್​ಎನಲ್ಲಿ ನೆಲೆಸಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿರುವುದಾಗಿ ತಿಳಿಸಿದ್ದಾರೆ.(ಏಜೆನ್ಸೀಸ್​)
ಮನೆಗೆ ಬಂದ ಮಹಾಲಕ್ಷ್ಮೀ… ಕಳೆದ 30 ವರ್ಷ ಎಲ್ಲಿದ್ದರು? ನಟಿ ಬಾಯ್ಬಿಟ್ಟ ಎಕ್ಸ್​ಕ್ಲೂಸಿವ್ ಮಾಹಿತಿ ಇಲ್ಲಿದೆ

ಏಲಿಯನ್​ಗಳು ಮಾನವ ಸಂಪರ್ಕಕ್ಕೆ ಯತ್ನಿಸುತ್ತಿವೆ: ಖಗೋಳ ಭೌತಶಾಸ್ತ್ರಜ್ಞ ಕೊಟ್ಟ ಸ್ಫೋಟಕ ಕಾರಣ ಹೀಗಿದೆ…

ದೇವಸ್ಥಾನದ ಅನ್ನದಾನ ಸೇವೆಗೆ ಈ ಭಿಕ್ಷುಕಿ ಕೊಟ್ಟ ದೇಣಿಗೆ ಎಷ್ಟು ಅಂತ ಗೊತ್ತಾದ್ರೆ ಅಚ್ಚರಿಯಾಗುತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 15 =
Remember me
