ಮುಂಬೈ:2047ರ ವೇಳೆಗೆ ಭಾರತ ಅಭಿವೃದ್ದಿ ಹೊಂದಿದ ರಾಷ್ಟ್ರವಾಗುವುದರಲ್ಲಿ ಬಾಲಿವುಡ್​ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಗಾಯಕ ಕೈಲಾಶ್​ ಖೇರ್​ ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿರುವ ಅಮೃತಕಾಲ ಯೋಜನೆ ಕುರಿತು ಮಾತನಾಡುವ ವೇಳೆ ಹೇಳಿದ್ದಾರೆ.
ಖಾಸಗಿ ಸುದ್ದಿಸಂಸ್ಥೆಯೊಂದರ ಸಂದರ್ಶನದಲ್ಲಿ ಮಾತನಾಡಿದ ಕೈಲಾಶ್​ ಖೇರ್​ ಉತ್ತಮ ವೇಗ ಹೊಂದಿರುವ ಭಾರತೀಯರು ಈಗಾಗಲೇ ದೇಶವನ್ನು ಅಭಿವೃದ್ದಿಯ ಪಥದಲ್ಲಿ ಇರಿಸಿದ್ದಾರೆ. 2047ಕ್ಕೂ ಮುಂಚಿತವಾಗಿಯೇ ಭಾರತ ಅಭಿವೃದ್ದಿ ಹೊಂದಿದ ರಾಷ್ಟ್ರವಾಗಲಿದೆ ಎಂದು ಹೇಳಿದ್ಧಾರೆ.
ಭಾರತದ ಆತಿಥ್ಯದಲ್ಲಿ ನಡೆದ ಜಿ-20 ಶೃಂಗಸಭೆಯ ಯಶಸ್ಸನ್ನು ಉಲ್ಲೇಖಿಸಿ ಮಾತನಾಡಿದ ಕೈಲಾಶ್​ ಪ್ರಧಾನಿ ಮೋದಿ ಅವರು ದೇಶದ ಅಭಿವೃದ್ದಿಯ ಹಿತದೃಷ್ಟಿಯಿಂದ ಕರೆ ಕೊಟ್ಟಿರುವ ಅಮೃತಕಾಲ ಯೋಜನೆಗೆ ಸಂಬಂಧಿಸಿದಂತೆ ಬಾಲಿವುಡ್​ ಪ್ರಮುಖ ಪಾತ್ರ ವಹಿಸಲಿದೆ. ಇತ್ತೀಚಿನ ವರ್ಷಗಳಲ್ಲಿ ವಿಶ್ವದಲ್ಲಿ ಭಾರತದ ಚಿತ್ರಣವು ಹೆಚ್ಚು ಪ್ರಾಮುಖ್ಯತೆಯನ್ನು ಗಳಿಸಿದ್ದು, 2047ರ ವೇಳೆಗೆ ಭಾರತ ಅಭಿವೃದ್ದಿ ಹೊಂದಿದ ರಾಷ್ಟ್ರವಾಗಲಿದೆ.
ಇದನ್ನೂ ಓದಿ:ಸನಾತನ ಧರ್ಮ ನಿರ್ಮೂಲನೆಗಾಗಿಯೇ I.N.D.I.A ಮೈತ್ರಿಕೂಟ ರಚಿಸಲಾಗಿದೆ: ತಮಿಳುನಾಡು ಸಚಿವ ಪೊನ್ಮುಡಿ
ಚಿತ್ರೋದ್ಯಮ ರಚನಾತ್ಮಕವಾಗಿದ್ದು, ಸಕಾರಾತ್ಮಕವಾಗಿ ಕೆಲಸ ಮಾಡಬೇಕಾಗಿದೆ. ಕಲೆ ಮತ್ತು ಸಂಸ್ಕೃತಿ ದೇಶದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವಿಶ್ವದಾದ್ಯಮತ ಪ್ರಧಾನಿ ಮೋದಿ ನಾಯಕತ್ವದಲ್ಲಿ ಭಾರತವು ವಿಶ್ವದಲ್ಲಿ ಹೆಚ್ಚು ಪ್ರಾಮುಖ್ಯತೆಯನ್ನು ಪಡೆದಿದೆ. ಜಿ-20 ಶೃಂಗಸಭೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬ ನಾಯಕರು ಸಹ ಮೋದಿಯ ನಾಯಕತ್ವದಿಂದ ಹೆಚ್ಚು ಪ್ರಭಾವಿತರಾಗಿದ್ದಾರೆ.
ಆಫ್ರಿಕನ್​ ಒಕ್ಕೂಟವನ್ನು ಜಿ-20 ಭಾಗವಾಗಿಸಿದ ಕ್ರಮವನ್ನು ಶ್ಲಾಘಿಸಿದ ಕೈಲಾಶ್​ ಖೇರ್​ ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಚಾರ ಎಂದು ಪ್ರಧಾನಿ ಮೋದಿ ನಾಯಕತ್ವವನ್ನು ಹಾಡಿ ಹೊಗಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × two =
Remember me
