ಚೆನ್ನೈ:ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಕಳ್ಳಭಟ್ಟಿ ಸೇವಿಸಿ ಮೃತಪಟ್ಟವರ ಸಂಖ್ಯೆ 55ಕ್ಕೆ ಏರಿಕೆಯಾಗಿದ್ದು, 100ಕ್ಕೂ ಅಧಿಕ ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಪೊಲೀಸರು 200 ಲೀಟರ್​ ಕಳ್ಳಭಟ್ಟಿಯನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರೆಸಿದ್ದಾರೆ.
ಪ್ರಕರಣವನ್ನು ತಮಿಳುನಾಡು ಸರ್ಕಾರವು ಸಿಐಡಿಗೆ ವಹಿಸಿದ್ದು, ಕಲ್ಲಕುರಚಿ ಜಿಲ್ಲಾಧಿಕಾರಿಯನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ. ಇದೆಲ್ಲದೆ ಘಟನೆಗೆ ಸಂಬಂಧಿಸಿದಂತೆ 9 ಮಂದಿ ಅಧಿಕಾರಿಗಳನ್ನು ಸರ್ಕಾರ ಅಮಾನತು ಮಾಡಿದ್ದು, ಮೃತರ ಕುಟುಂಬಗಳಿಗೆ 10 ಲಕ್ಷ ರೂಪಾಯಿ ಹಾಗೂ ಚಿಕಿತ್ಸೆ ಪಡೆಯುತ್ತಿರುವವರಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಸಿಎಂ ಸ್ಟಾಲಿನ್​ ಘೋಷಿಸಿದ್ದಾರೆ.
ಇದನ್ನೂ ಓದಿ:ರೇಣುಕಸ್ವಾಮಿ ಹತ್ಯೆ ಕೇಸ್​; ದರ್ಶನ್​ ಕೊಲೆ ಮಾಡುವಷ್ಟು ಕ್ರೂರಿಯಲ್ಲ ಎಂದ ಕಾಂಗ್ರೆಸ್ ಶಾಸಕ
ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಕಲ್ಲಕುರಿಚಿ ಕಳ್ಳಭಟ್ಟಿ ದುರಂತದಲ್ಲಿ ಮೃತರ ಕುಟುಂಬವನ್ನು ಭೇಟಿ ಮಾಡಿದ್ದು ಮೃತರ ಕುಟುಂಬಕ್ಕೆ ಬಿಜೆಪಿ ಪರವಾಗಿ 1 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಕಳ್ಳಭಟ್ಟಿ ದುರಂತ ಪ್ರಕರಣದಲ್ಲಿ ನಿಷೇಧ ಮತ್ತು ಜಾರಿ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕ ಮಹೇಶ್ ಕುಮಾರ್, ಐಪಿಎಸ್ ಅವರನ್ನು ವಜಾಗೊಳಿಸಲಾಗಿದ್ದು, ಇವರ ಹೊಣೆಯನ್ನು ಎಡಿಜಿಪಿ ಅರುಣ್​ ಅವರಿಗೆ ನೀಡಲಾಗಿದೆ.
ಘಟನೆಗೆ ಸಂಬಂಧಿಸಿದಂತೆ 200 ಲೀಟರ್​ ಮದ್ಯವನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ಅದರಲ್ಲಿ ಮೆಥನಾಲ್​ ಇರುವುದನ್ನು ಪತ್ತೆ ಹಚ್ಚಿದ್ದಾರೆ. ಅಕ್ರಮ ಮದ್ಯದಲ್ಲಿ ಬೆರೆಸಿದ್ದ ಮೆಥೆನಾಲ್ ಅನ್ನು ಪುದುಚೇರಿಯಿಂದ ತರಲಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿದೆ. ಈ ಸಂಬಂಧ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
