ಚೆನ್ನೈ:ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೊಯಮತ್ತೂರು ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತವನ್ನು ಬಹುಭಾಷಾ ನಟ, ಮಕ್ಕಳ್​ ನೀತಿ ಮೈಯಂ (MNM) ಪಕ್ಷದ ಮುಖ್ಯಸ್ಥ ಕಮಲ್​ ಹಾಸನ್​ ವ್ಯಕ್ತಪಡಿಸಿದ್ದಾರೆ. ಅವರ ಈ ಮಾತು ತಮ್ಮ ಪಕ್ಷವು ಡಿಎಂಕೆ ನೇತೃತ್ವದ ಜಾತ್ಯತೀತ ಪ್ರಗತಿಶೀಲ ಮೈತ್ರಿಕೂಟಕ್ಕೆ (SPA) ಸೇರುತ್ತದೆ ಎಂಬ ಊಹಾಪೋಹಗಳಿಗೆ ಪುಷ್ಠಿ ನೀಡಿದೆ.
2021ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೊಯಮತ್ತೂರು ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಕೆಲವೇ ಮತಗಳ ಅಂತರದಲ್ಲಿ ಸೋಲುಂಡಿದ್ದರು.
ಇದನ್ನೂ ಓದಿ:VIDEO| ಸಂಸದರು ಗರ್ಭಗುಡಿಯಲ್ಲಿನ ದೇವರ ಮೂರ್ತಿಗಳಿದ್ದಂತೆ ಯಾವುದೇ ಅಧಿಕಾರವಿಲ್ಲ: ರಾಹುಲ್​ ಗಾಂಧಿ
ಪಕ್ಷದ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಕಮಲ್​ ಹಾಸನ್​ ಜನರು ನನ್ನ ಚಿತ್ರಗಳನ್ನು ಬಂದು ವೀಕ್ಷಿಸುವ ಹಾಗೆ ನನಗೆ ಏಕೆ ಮತ ಹಾಕುವುದಿಲ್ಲ. ಹಾಗಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸಲು ಸಿದ್ದತೆ ಆರಂಭಿಸಿದ್ದೇನೆ ಎಂದು ಹೇಳುವ ತಮ್ಮ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.
2024ರ ಲೋಕಸಭೆ ಚುನಾವಣೆಯಲ್ಲಿ ಮಕ್ಕಳ್​ ನೀತಿ ಮೈಯಂ (MNM) ಪಕ್ಷವು ತಮಿಳುನಾಡು ಸಿಎಂ ಸ್ಟಾಲಿನ್​ ನೇತೃತ್ವದ ಡಿಎಂಕೆ ಜೊತೆ ಮೈತ್ರಿ ಮಾಡಿಕೊಳ್ಳುವುದು ಬಹುತೇಕ ಖಚಿತವಾಗಿದೆ. ತಮ್ಮ ಪಕ್ಷಕ್ಕೆ ಹೆಚ್ಚಿನ ಲಾಭವಾಗುವ ನಿಟ್ಟಿನಲ್ಲಿ ಕಮಲ್​ ಹಾಸನ್​ ಈ ಮೈತ್ರಿಗೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
