ಭೋಪಾಲ್​:ಮುಂಬರುವ ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್​ಗೆ ಯಾಕೋ ಎಲ್ಲಾ ಅಂದುಕೊಂಡಂತೆ ಆಗಿ ಬರುತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ಹಿರಿಯ ನಾಯಕರು ಪಕ್ಷಕ್ಕೆ ಗುಡ್​ ಬೈ ಹೇಳುತ್ತಿದ್ದು, ಇದೀಗ ಮತ್ತೊಬ್ಬ ಹಿರಿಯ ನಾಯಕ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದು, ಕಾಂಗ್ರೆಸ್​ ನಾಯಕತ್ವದ ಕುರಿತು ಅಸಮಾಧಾನ ಹೊರಹಾಕಿದ್ದಾರೆ.
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್​ನಾಥ್​ ಹಾಗೂ ಅವರ ಪುತ್ರ ಛಿಂದ್ವಾರ ಕ್ಷೇತ್ರದ ಸಂಸದ ನಕುಲ್​ನಾಥ್​ ಅವರು ತಮ್ಮ ಎಕ್ಸ್ ಬಯೋದಿಂದ ಕಾಂಗ್ರೆಸ್ ಅನ್ನು ತೆಗೆದುಹಾಕಿರುವುದು ಇವರ ಬಿಜೆಪಿ ಸೇರ್ಪಡೆ ವದಂತಿ ಕುರಿತು ಮತ್ತಷ್ಟು ಪುಷ್ಠಿ ನೀಡಿದೆ.
#WATCH| On being asked if he is joining BJP, former Madhya Pradesh CM and Congress leader Kamal Nath says "Why are you all getting excited? It is not about denying. I will inform you all if there is something like that…"pic.twitter.com/GK9uNIQVAL
ಇದನ್ನೂ ಓದಿ:ಮಾಜಿ ಕ್ರಿಕೆಟಿಗ ಯುವರಾಜ್​ ಸಿಂಗ್​ ಮನೆಯಲ್ಲಿ ಕಳ್ಳತನ; ಕಾಣೆಯಾದ ನಗದು, ಚಿನ್ನಾಭರಣ ಮೌಲ್ಯ ಎಷ್ಟು ಗೊತ್ತಾ?
ಈಗಾಗಲೇ ಮಧ್ಯಪ್ರದೇಶದ ಛಿಂದ್ವಾರ ಕ್ಷೇತ್ರದ ಮತದಾರರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿರುವ ಕಮಲ್​ನಾಥ್ ಹಾಗೂ ಅವರ ಪುತ್ರನಿಗೆ​ ಬಿಜೆಪಿ ಸೇರುವುದು ಸೂಕ್ತ ಎಂದು ಅಲ್ಲಿನ ಜನರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇದಲ್ಲದೆ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿನ ಬಳಿಕ ಕಮಲ್​ನಾಥ್​ ಅವರನ್ನು ಮೂಲೆಗುಂಪು ಮಾಡಲಾಗಿದ್ದು, ಇದು ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ತಿಳಿದು ಬಂದಿದೆ.
ಈಗಾಗಲೇ ದೆಹಲಿಯಲ್ಲಿರುವ ಕಮಲ್​ನಾಥ್​ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಒಂದು ವೇಳೆ ಕಮಲ್​ನಾಥ್​ ಪಕ್ಷ ತ್ಯಜಿಸಿದ್ದಲ್ಲಿ ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್​ಗೆ ದೊಡ್ಡ ಹೊಡೆತ ಬೀಳಲಿದ್ದು, ಇದನ್ನು ನಾಯಕರು ಹೇಗೆ ನಿಭಾಯಿಸಲಿದ್ದಾರೆ ಎಂದು ಕಾದು ನೋಡಬೇಕಿದೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:3 × 4 =
Remember me
