ಚಂಡೀಗಢ:ಸದಾ ತಮ್ಮ ಹೇಳಿಕೆಗಳ ಮೂಲಕವೇ ಸುದ್ದಿಯಲ್ಲಿರುವ ಬಾಲಿವುಡ್​ ನಟಿ, ಮಂಡಿ ಲೋಕಸಭಾ ಕ್ಷೇತ್ರದ ಸಂಸದೆ ಕಂಗನಾ ರಣಾವತ್ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ರೈತರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ CISF ಮಹಿಳಾ ಪೇದೆ ನೂತನ ಸಂಸದೆಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಪಾಳಕ್ಕೆ ಹೊಡೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಕಂಗನಾ ಮೇಲೆ ಹಲ್ಲೆ ನಡೆಸಿರುವ ಪೇದೆ ಹೆಸರು ಕುಲ್ವಿಂದರ್​ ಕೌರ್​ ಎಂದು ಗುರುತಿಸಲಾಗಿದ್ದು, ಕಂಗನಾ ರೈತರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಚಂಡೀಗಢದಿಂದ ದೆಹಲಿಯತ್ತ ಪ್ರಯಾಣ ಮಾಡುವಾಗ ಈ ಘಟನೆ ನಡೆದಿದ್ದು, ತನಿಖೆ ನಡೆಸಲು CISF ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ನಟಿ ಕಂಗನಾ ಕಚೇರಿ ಸಿಬ್ಬಂದಿ, ಚೆಕ್ಕಿಂಗ್​ ನಂತರ ಬೋರ್ಡಿಂಗ್​ ಪಾಯಿಂಟ್​ನತ್ತ ತೆರಳುವಾಗ ಕುಲ್ವಿಂದರ್​ ಕೌರ್​ ಎಂಬ ಅಧಿಕಾರಿಯು ನೀವು ರೈತರಿಗೆ ಅವಮಾನ ಮಾಡಿದ್ದೀರಾ ಎಂದು ಆರೋಪಿಸಿ ಕಂಗನಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ಸಂಬಂಧಿ CISF ನಿರ್ದೇಶಕ ನೀನಾ ಸಿಂಗ್​ ಅವರಿಗೆ ದೂರು ನೀಡಲಾಗಿದ್ದು, ಉನ್ನತ ಮಟ್ಟದ ಸಮಿತಿಯನ್ನು ರಚಿಸಿ ತನಿಖೆಗೆ ಆದೇಶಿಸಿದ್ದಾರೆ ಎಂದು ಕಂಗನಾ ಕಚೇರಿ ಸಿಬ್ಬಂದಿ ತಿಳಿಸಿದ್ದಾರೆ.
#WATCH| BJP leader and actor Kangana Ranaut arrives at Delhi airportA constable-rank CISF officer allegedly slapped Kangana at Chandigarh Airport during a frisking argument. An inquiry committee comprising senior CISF officers has been set up to conduct a further…pic.twitter.com/kUHmg7PsAs
Kangana Ranaut slapped by CISF constable Kulwinder Kaur at Chandigarh airport for calling protesting farmers Khalistanis.pic.twitter.com/IGfXz2l4os
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:7 + 5 =
Remember me
