ಮಂಡಿ:ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಕ್ಷೇತ್ರದ ಮೂಲಕ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ರಾಜಕೀಯ ಪಾದಾರ್ಪಣೆ ಮಾಡಿದ ಮೊದಲ ಚುನಾವಣೆಯಲ್ಲೇ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಗೆಲುವಿನ ನಗೆ ಬೀರಿದ್ದಾರೆ.
ಇದನ್ನೂ ಓದಿ:ಲೋಕಸಭಾ ಚುನಾವಣೆ ಫಲಿತಾಂಶ: ತಲೆಕೆಳಗಾದ ಎಕ್ಸಿಟ್​ ಪೋಲ್​ ಲೆಕ್ಕಾಚಾರ
ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ಅವರು ಗೆಲುವಿನ ನಗೆ ಬೀರಿದರು. ಈ ಮೂಲಕ ಹಿಮಾಚಲ ಪ್ರದೇಶದ ಲೋಕಸಭಾ ಚುನಾವಣೆಯಲ್ಲಿ ಮಂಡಿ ಕ್ಷೇತ್ರವನ್ನು ಬಿಜೆಪಿಯ ತೆಕ್ಕೆಗೆ ಹಾಕಿದ್ದಾರೆ.
ಕಂಗನಾ ರಣಾವತ್ 5,16382 ಮತಗಳನ್ನು ಪಡೆಯುವ ಮೂಲಕ 71,663 ಅಂತರದಿಂದ ಮುನ್ನಡೆಯಲ್ಲಿದ್ದಾರೆ. ಐಎನ್‌ಸಿಯ ವಿಕ್ರಮಾದಿತ್ಯ ಸಿಂಗ್ ಅವರು 44,4719 ಮತಗಳೊಂದಿಗೆ ಹಿನ್ನಡೆ ಅನುಭವಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಂಗನಾ ರಣಾವತ್, ಮಂಡಿಯು “ಹೆಣ್ಣು ಮಕ್ಕಳ ಬಗ್ಗೆ ಕೀಳಾಗಿ ಮಾತನಾಡಿದವರು ಅದರ ಪರಿಣಾಮಗಳನ್ನು ಅನುಭವಿಸಬೇಕಾಗುತ್ತದೆ. ಇಂದು ನಾವು ಮುನ್ನಡೆ ಸಾಧಿಸಿದ ರೀತಿಯಲ್ಲಿ ಅದು ಸ್ಪಷ್ಟವಾಗುತ್ತಿದೆ. ಮಂಡಿಯು ಹೆಣ್ಣುಮಕ್ಕಳ ಅವಮಾನಗಳನ್ನು ಸಹಿಸುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಇದು ನನ್ನ ‘ಜನ್ಮಭೂಮಿ’. ನಾನು ಪ್ರಧಾನಿ ನರೇಂದ್ರ ಮೋದಿಯ ಹೆಸರಿನಲ್ಲೇ ಗೆಲುವು ಕಂಡಿದ್ದೇನೆ. ನಾನು ಇಲ್ಲಿ ಜನರ ಸೇವೆಯನ್ನು ಮುಂದುವರಿಸುತ್ತೇನೆ. ಹಾಗಾಗಿ, ನಾನು ಗೆದ್ದ ಬಳಿಕ ಮುಂಬೈಗೆ ಹೋಗುತ್ತಿಲ್ಲ. ನಾನು ಎಲ್ಲಿಯೂ ಹೋಗುವುದಿಲ್ಲ. ನನ್ನ ಪ್ರತಿಸ್ಪರ್ಧಿ ತಮ್ಮ ಬ್ಯಾಗ್ ಪ್ಯಾಕ್ ಮಾಡಿಕೊಳ್ಳುವ ಮೂಲಕ ಇಲ್ಲಿಂದ ಹೊರಡಬಹುದು ಎಂದು ಹೇಳುವ ಮೂಲಕ ಬಾಲಿವುಡ್​ಗೆ ಗುಡ್​ಬೈ ಹೇಳುವ ಸೂಚನೆ ನೀಡಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + thirteen =
Remember me
