ಮುಂಬೈ:ಲೋಕಸಭಾ ಚುನಾವಣೆಗೆ ಇನ್ನೂ ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ಪೌರತ್ವ ತಿದ್ದುಪಡಿ ಕಾಯ್ದೆ (CAA)ಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ. ಸಿಎಎ ಜಾರಿ ಸಂಬಂಧಿಸಿದಂತೆ ರಾಷ್ಟ್ರ ರಾಜಕಾರಣದಲ್ಲಿ ಪರ-ವಿರೋಧದ ಚರ್ಚೆ ವ್ಯಾಪಕವಾಗಿ ನಡೆಯುತ್ತಿದ್ದು, ಹಲವಾರು ಸೆಲೆಬ್ರಿಟಿಗಳು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.
ಇದೀಗ ಸಿಎಎ ಜಾರಿ ಸಂಬಂಧಿಸಿದಂತೆ ಬಾಲಿವುಡ್​ನ ಸ್ಟಾರ್​ ನಟಿ ಕಂಗನಾ ರಣಾವತ್​ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ಇನ್ಸ್​​ಟಾಗ್ರಾಂನಲ್ಲಿ ಈ ಕುರಿತು ಬರೆದುಕೊಂಡಿರುವ ನಟಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಷಾ ಹಾಗೂ ರಾಷ್ಟ್ರಧ್ವಜ ಇರುವ ಎಮೋಜಿಯನ್ನು ಬಳಸಿ ಸ್ಟೋರಿಯಲ್ಲಿ ಪೋಸ್ಟ್​ ಮಾಡಿದ್ದಾರೆ.
ಇದನ್ನೂ ಓದಿ:ತರಬೇತಿ ವೇಳೆ ಯುದ್ಧ ವಿಮಾನ ಪತನ; ಪ್ರಾಣಾಪಾಯದಿಂದ ಪಾರಾದ ಪೈಲಟ್
2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಮಾತನಾಡಿರುವ ವಿಡಿಯೋವನ್ನು ಹಂಚಿಕೊಂಡಿರುವ ನಟಿ ಕಂಗನಾ ಇದರ ಬಗ್ಗೆ ನಿಮ್ಮ ಭಾವನೆ ಮತ್ತು ಅಭಿಪ್ರಾಯವನ್ನು ವ್ಯಕ್ತಪಡಿಸುವುದಕ್ಕೂ ಮುನ್ನ ಸಿಎಎ ಎಂದರೆ ಏನು ಎಂಬುದನ್ನು ತಿಳಿದುಕೊಳ್ಳಿ ಎಂದು ವಿರೋಧಿಸುವವರಿಗೆ ತಮ್ಮ ಇನ್ಸ್​​ಟಾಗ್ರಾಂ ಕ್ಯಾಪ್ಷನ್​ ಮೂಲಕ ಟಾಂಗ್​ ಕೊಟ್ಟಿದ್ದಾರೆ.
ಸಿಎಎ ಬಗ್ಗೆ ನಟಿ ಕಂಗನಾ ಮಾತನಾಡುತ್ತಿರುವುದು ಇದೇ ಮೊದಲಲ್ಲ 2019ರಲ್ಲಿ ದೇಶವ್ಯಾಪಿ ಪೌರತ್ವ ತಿದ್ದುಪಡಿ ಕಾಯ್ದೆ ಖಂಡಿಸಿ ನಡೆದಿದ್ದ ಪ್ರತಿಭಟನೆ ವೇಳೆ ಉಂಟಾದ ಹಿಂಸಾಚಾರ ಹಾಗೂ ಹೇಳಿಕೆಗಳಿಗೆ ಸಂಬಂಧಿಸಿದಂತೆ ಬಾಲಿವುಡ್​ ನಟರ ಮೌನ ಖಂಡಿಸಿ ಕಂಗನಾ ಅವರನ್ನು ಹೇಡಿಗಳು ಎಂದು ಕರೆದಿದ್ದರು. ಕಂಗನಾ ರಣಾವತ್​ ಅವರು ಇನ್ನೂ ನೇರವಾಗಿ ರಾಜಕೀಯಕ್ಕೆ ಕಾಲಿಟ್ಟಿಲ್ಲ. ಆದರೂ ಅವರು ರಾಜಕೀಯದ ಕುರಿತು ಅನೇಕ ವಿಚಾರಗಳ ಬಗ್ಗೆ ತಮ್ಮ ಅನಿಸಿಕೆ ತಿಳಿಸುತ್ತಿರುತ್ತಾರೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:2 × two =
Remember me
