ನವದೆಹಲಿ:ಕಾಂಟ್ರವರ್ಸಿ ಕ್ವೀನ್​ ಎಂದೇ ಫೇಮಸ್​ ಆಗಿರೋ ನಟಿ ಕಂಗನಾ ರಣಾವತ್​. ನೇರ ದಿಟ್ಟ ಮಾತಿನಿಂದ ಒಂದು ವರ್ಗದ ಜನರ ಕೆಂಗಣ್ಣಿಗೆ ಗುರಿಯಾಗ್ತಿರೋ ನಟಿ ಕಂಗನಾ ಅವರ ನಟನಾ ಕೌಶಲಕ್ಕೆ ಅವರೇ ಸಾಟಿ. ಇವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತು ಹರಿದಾಡುತ್ತಿದೆ.
ಇದನ್ನೂ ಓದಿ:ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಬಿಡುವ ಮಾತನಾಡಿದ್ದೇಕೆ?
2024ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸುಮಾರು 150 ಲೋಕಸಭಾ ಸ್ಥಾನಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರನ್ನು ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದ್ದು, ವಿಶೇಷವಾಗಿ ಅವುಗಳಲ್ಲಿ ಅತೀ ಹೆಚ್ಚು ಬಿಜೆಪಿ ಸೋತಿರುವ ಕ್ಷೇತ್ರಗಳೇ ಆಗಿರುತ್ತದೆ ಎನ್ನಲಾಗಿದೆ.
ಸದ್ಯ ಚುನಾವಣೆ ಘೋಷಣೆಗೂ ಮುನ್ನವೇ ದೆಹಲಿಯಲ್ಲಿ ಅಭ್ಯರ್ಥಿಗಳ ಹೆಸರನ್ನು ಘೋಷಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ. ಮಂಡಿ ಲೋಕಸಭಾ ಕ್ಷೇತ್ರವೂ ಇದರಲ್ಲಿ ಒಂದು. ಇಲ್ಲಿಯೂ ನಿಗದಿತ ಸಮಯಕ್ಕಿಂತ ಮೊದಲು ಅಭ್ಯರ್ಥಿಯ ಹೆಸರನ್ನು ಘೋಷಿಸುವ ಸಾಧ್ಯತೆ ಇದ್ದು, ಕಳೆದುಹೋದ ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಸಮಯಕ್ಕಿಂತ ಮುಂಚಿತವಾಗಿ ಪ್ರಚಾರವನ್ನು ಪ್ರಾರಂಭಿಸುವುದು ಬಿಜೆಪಿಯ ತಂತ್ರಗಾರಿಕೆಯಾಗಿದೆ.
ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಹೊರಬೀಳುತ್ತಿದ್ದು, ಇದರಲ್ಲಿ ವಿಶೇಷವಾಗಿ ಬಾಲಿವುಡ್ ನಟಿ ಕಂಗನಾ ರಣಾವತ್‌ ಹೆಸರು ಕೂಡ ಮುಂಚೂಣಿಯಲ್ಲಿದೆ. ಕಳೆದ ಕೆಲವು ಸಮಯದಿಂದ ಕಂಗನಾ ರಣಾವತ್ ಬಿಜೆಪಿಯಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಸಿಕ್ಕಾಪಟ್ಟೆ ಹರಿದಾಡಿತ್ತು.
ಕಂಗನಾ ರಣಾವತ್ ಕೂಡ ಇದನ್ನು ಅಲ್ಲಗಳೆಯದೆ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಪರೋಕ್ಷವಾಗಿ ಆಸಕ್ತಿ ತೋರಿದ್ದರು. ಹೀಗಾಗಿ ಮಂಡಿ ಲೋಕಸಭಾ ಕ್ಷೇತ್ರದಿಂದ ಕಂಗನಾ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಇನ್ನುಳಿದಂತೆ ಮಾಜಿ ಸಿಎಂ ಮತ್ತು ವಿರೋಧ ಪಕ್ಷದ ನಾಯಕ ಜೈರಾಮ್ ಠಾಕೂರ್ ಅವರ ಹೆಸರು ಕೂಡ ಮಂಡಿ ಲೋಕಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಗಳ ಸಾಲಿನಲ್ಲಿ ಪ್ರಬಲವಾಗಿ ಕೇಳಿಬಂದಿದ್ದು, ಆದರೆ ಜೈರಾಮ್ ಠಾಕೂರ್ ಅವರು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಈಗಾಗಲೇ ಹೇಳಿದ್ದಾರೆ.
ಬಿಜೆಪಿಯ ಮಾಜಿ ಅಭ್ಯರ್ಥಿ ಬ್ರಿಗೇಡಿಯರ್ ಖುಶಾಲ್ ಠಾಕೂರ್, ಮನಾಲಿ ಪುರಸಭೆಯ ಅಧ್ಯಕ್ಷ ಮತ್ತು ಎಚ್‌ಪಿ ಮುನ್ಸಿಪಲ್ ಕಾರ್ಪೊರೇಷನ್, ಉಪಾಧ್ಯಕ್ಷ ಫೆಡರೇಶನ್ ಅಧ್ಯಕ್ಷ ಚಮನ್ ಕಪೂರ್, ಬಿಜೆಪಿ ನಾಯಕ ಅಜಯ್ ರಾಣಾ ಮತ್ತು ಈ ಹಿಂದೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆಶ್ರಯ ಶರ್ಮಾ ಅವರ ಪ್ರಮುಖ ಹೆಸರುಗಳು ಪ್ರಮುಖವಾಗಿ ಪ್ರಸ್ತಾಪವಾಗಿವೆ. ಇನ್ನು ಕಂಗನಾ ಕೂಡ ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದು, ಇದರೊಂದಿಗೆ ಮಾಜಿ ಸಂಸದ ಮಹೇಶ್ವರ್ ಸಿಂಗ್ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಕೆಂಪಣ್ಣ ಭ್ರಷ್ಟಾಚಾರ ಆರೋಪಕ್ಕೆ ಸಚಿವ ರಾಮಲಿಂಗಾರೆಡ್ಡಿ, ಪ್ರಿಯಾಂಕ ಖರ್ಗೆ ಹೇಳಿದಿಷ್ಟು?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fifteen − ten =
Remember me
